LIVE: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ - Siddaramaiah Press Meet - SIDDARAMAIAH PRESS MEET

🎬 Watch Now: Feature Video

thumbnail

By ETV Bharat Karnataka Team

Published : Jul 19, 2024, 4:11 PM IST

Updated : Jul 19, 2024, 5:27 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಸದನದಲ್ಲಿ ಉತ್ತರ ನೀಡಿದ ಸಿಎಂ, ಸುದ್ದಿಗೋಷ್ಠಿ ಮೂಲಕ ವಿವರ ನೀಡಲಿದ್ದಾರೆ. ಜೊತೆಗೆ ಬಿಜೆಪಿ ಅವಧಿಯಲ್ಲಾಗಿರುವ ಹಗರಣಗಳ ಬಗ್ಗೆ ಮಾಹಿತಿ ಕೊಡಲಿದ್ದಾರೆ. ಈಗಾಗಲೇ ಸದನದಲ್ಲಿ ಬಿಜೆಪಿ ಅವಧಿಯಲ್ಲಿನ ತಾಂಡ ಅಭಿವೃದ್ಧಿ ನಿಗಮ ಹಗರಣ, ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಅಕ್ರಮ, ಬೋವಿ ಅಭಿವೃದ್ಧಿ ನಿಗಮ ಅಕ್ರಮ, ಗಂಗಾ ಕಲ್ಯಾಣ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಬಿಜೆಪಿ ವಿರುದ್ಧ ತಿರುಗೇಟು ನೀಡುವ ಸಾಧ್ಯತೆ ಇದೆ. ಬಿಜೆಪಿ ಅವಧಿಯಲ್ಲಿ ವಿವಿಧ ನಿಗಮಗಳಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ‌. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಸ್ತೃತವಾಗಿ ಮಾತನಾಡಲಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಈಗಾಗಲೇ ಮುಂಗಾರು ಅಧಿವೇಶನದ ಉಭಯ ಸದನಗಳಲ್ಲೂ ಕೂಡ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅಲ್ಲದೆ, ಬಿಜೆಪಿ - ಜೆಡಿಎಸ್​ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಅಧಿವೇಶನದ ಆರಂಭದ ದಿನ ಪ್ರತಿಪಕ್ಷಗಳು ಪ್ರತಿಭಟನಾ ಮೆರವಣಿಗೆಯನ್ನೂ ನಡೆಸಿದ್ದವು.
Last Updated : Jul 19, 2024, 5:27 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.