LIVE: ಹಾಸನದಲ್ಲಿ ಜನಕಲ್ಯಾಣ ಸಮಾವೇಶ, ದಳಪತಿಗಳ ಕೋಟೆಯಲ್ಲಿ 'ಕೈ' ಶಕ್ತಿ ಪ್ರದರ್ಶನ - CONGRESS CONVENTION

🎬 Watch Now: Feature Video

thumbnail

By ETV Bharat Karnataka Team

Published : Dec 5, 2024, 2:21 PM IST

Updated : Dec 5, 2024, 3:59 PM IST

ಹಾಸನ: ಹಾಸನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನಕಲ್ಯಾಣ ಸಮಾವೇಶ ನಡೆಯುತ್ತಿದೆ. ಬೃಹತ್​ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷ ಜನರು ಸೇರಿದ್ದಾರೆ. ಹಾಸನ ನಗರದ ಹೊರವಲಯದಲ್ಲಿ ನಿರ್ಮಾಣವಾಗಿರುವ ಎಸ್​.ಎಂ. ಕೃಷ್ಣ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಕಾಂಗ್ರೆಸ್​ ಸರ್ಕಾರದ ಸುಮಾರು 20ಕ್ಕೂ ಹೆಚ್ಚು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸಮಾವೇಶದ ಭದ್ರತೆಗಾಗಿ ಐವರು ಎಸ್ಪಿ, 6 ಮಂದಿ ಹೆಚ್ಚುವರಿ ಎಸ್ಪಿ, 12 ಡಿವೈಎಸ್ಪಿ, 40 ಇನ್ಸ್​ಪೆಕ್ಟರ್​ ಮತ್ತು 80 ಪಿಎಸ್​​ಐಗಳನ್ನು ಒಳಗೊಂಡ ಸುಮಾರು 2,000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪೊಲೀಸರನ್ನು ನೆರೆಯ ಜಿಲ್ಲೆಗಳಾದ ಮಂಡ್ಯ, ಮೈಸೂರು ಕೊಡಗಿನಿಂದಲೂ ಕರೆಸಿಕೊಳ್ಳಲಾಗಿದೆ. ವಿವಿಧ ಜಿಲ್ಲೆಗಳಿಂದ ಜನರನ್ನು ಕರೆ ತರಲು ಬಸ್​ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಬೆಂಗಳೂರಿನಿಂದ ಹಾಸನ, ಮಂಗಳೂರು, ಚಿಕ್ಕಮಗಳೂರು, ಮಡಿಕೇರಿ, ಧರ್ಮಸ್ಥಳ ಸೇರಿದಂತೆ ಹೆಚ್ಚುವರಿ ಬಸ್​ಗಳನ್ನು ಓಡಿಸಲಾಗುತ್ತಿದೆ. ಅರಸೀಕೆರೆ ಕ್ಷೇತ್ರದಿಂದ ಶಾಸಕ ಕೆ.ಎಂ.ಶಿವಲಿಂಗೇಗೌಡ, ಚನ್ನರಾಯಪಟ್ಟಣ ತಾಲೂಕಿನಿಂದ ಎಂ.ಎ.ಗೋಪಾಲಸ್ವಾಮಿ ನೇತೃತ್ವದಲ್ಲಿ ಸುಮಾರು 30ರಿಂದ 40 ಸಾವಿರ ಜನರನ್ನು ಕರೆತರುವ ನಿಟ್ಟಿನಲ್ಲಿ 100ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಮಾಡಿದ್ದಾರೆ.
Last Updated : Dec 5, 2024, 3:59 PM IST

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.