ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಸುದ್ದಿಗೋಷ್ಠಿ LIVE - Congress releases candidate list
🎬 Watch Now: Feature Video
Published : Mar 8, 2024, 7:28 PM IST
|Updated : Mar 8, 2024, 7:37 PM IST
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಸುದ್ದಿಗೋಷ್ಠಿ ನಡೆಸುತ್ತಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ವೇಣುಗೋಪಾಲ್ ಮತ್ತು ಇತರೆ ನಾಯಕರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಕೇರಳದ ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಸೇರಿದಂತೆ 40 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ಅಂತಿಮಗೊಳಿಸಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 60 ಲೋಕಸಭಾ ಸ್ಥಾನಗಳ ಕುರಿತು ಚರ್ಚಿಸಲಾಯಿತು ಎಂದು ಮೂಲಗಳು ಮಾಹಿತಿ ನೀಡಿವೆ. ದೆಹಲಿ, ಕರ್ನಾಟಕ, ಕೇರಳ, ಛತ್ತೀಸ್ಗಢ, ತೆಲಂಗಾಣ, ಸಿಕ್ಕಿಂ, ತ್ರಿಪುರ, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ ಮತ್ತು ಲಕ್ಷದ್ವೀಪದ ಲೋಕಸಭೆ ಸ್ಥಾನಗಳ ಕುರಿತು ಚರ್ಚೆ ನಡೆದಿದೆ. ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲು ಬಯಸಿದ್ದಾರೆ. ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಜನಂದಗಾಂವ್ನಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಸಚಿವ ತಾಮ್ರಧ್ವಜ್ ಸಾಹು ಅವರು ರಾಜ್ಯದ ಮಹಾಸಮುಂಡ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಕೂಡ ಅಂತಿಮಗೊಂಡ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ ಎಂದು ಮೂಲಗಳು ತಿಳಿಸಿದ್ದವು.
Last Updated : Mar 8, 2024, 7:37 PM IST