ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿ ದಸರಾ ಸಂಭ್ರಮ: ವಿಡಿಯೋ - DASARA CELEBRATION
🎬 Watch Now: Feature Video
Published : Oct 9, 2024, 8:52 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2ರಲ್ಲಿ ಅಕ್ಟೋಬರ್ 11ರವರೆಗೆ ಅದ್ಧೂರಿಯಿಂದ ಆಚರಿಸಲಾಗುತ್ತಿದೆ.
ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ಸಂಸ್ಕೃತಿಯನ್ನು ಕಣ್ತುಂಬಿಸಿಕೊಳ್ಳಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನಮ್ಮ ಸಾಂಸ್ಕೃತಿಕ ಕಲೆಗಳಾದ ಯಕ್ಷಗಾನ, ಕೂಚುಪುಡಿ, ಡೊಳ್ಳು ಕುಣಿತ, ತಮಟೆ ವಾಧ್ಯ, ನಾಟ್ಯ, ಸಂಗೀತ ಕಚೇರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಟರ್ಮಿನಲ್ 1 ಮತ್ತು 2ರಲ್ಲಿ ನಡೆಸಲಾಗುತ್ತಿದೆ. ಈ ಎಲ್ಲಾ ಸಂಭ್ರಮಾಚರಣೆಯ ಭಾಗವಾಗಿ ಬೆಂಗಳೂರು ವಿಮಾನ ನಿಲ್ದಾಣ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಅಕ್ಟೋಬರ್ 8ರಂದು ಯಕ್ಷಗಾನ, ತಮಟೆವಾದ್ಯ ಜರುಗಿತು. ಜೊತೆಗೆ, ಜಾನಪದ ಗಾಯನ ಮತ್ತು ನೃತ್ಯ ರೂಪಕ, ವಿದ್ವಾನ್ ರೂಪಶ್ರೀ ಮಧುಸೂದನ್ ಅವರಿಂದ ನೃತ್ಯ ಮತ್ತು ಸಂಗೀತ ಕಲಾ ಪ್ರದರ್ಶನ ನಡೆಯಿತು. ಅಗಸ್ಟ್ 9ರಂದು ಕರ್ನಾಟಕ ಸಂಗೀತ ಹಾಗೂ ನೃತ್ಯ ರೂಪಕ, ಅಗಸ್ಟ್ 10ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಕೂಚುಪುಡಿ ನೃತ್ಯ ಪ್ರದರ್ಶನ, ಅಗಸ್ಟ್ 11ರಂದು ಬೊಂಬೆ ಪ್ರದರ್ಶನ ಇರಲಿದೆ. ಈ ಎಲ್ಲಾ ಸಾಂಪ್ರದಾಯಿಕ ಮನರಂಜನೆಯೊಂದಿಗೆ ದಸರಾ ಹಬ್ಬವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಣ್ತುಂಬಿಕೊಳ್ಳಬಹುದು.
ಇದನ್ನೂ ಓದಿ: ಅಂಬಾವಿಲಾಸ ಅರಮನೆಯ ದೀಪಾಲಂಕಾರದಲ್ಲಿ ಪೊಲೀಸ್ ಬ್ಯಾಂಡ್ ನಿನಾದ