ಗೋಕರ್ಣ: ಮಹಾಬಲೇಶ್ವರ ದೇಗುಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ - D K Shivakumar Visits Gokarna - D K SHIVAKUMAR VISITS GOKARNA
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/27-03-2024/640-480-21080355-thumbnail-16x9-vny.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Mar 27, 2024, 12:53 PM IST
ಕಾರವಾರ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರನಿಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ಮಾಡಿಸಿದರು.
ಹತ್ತು ಮಂದಿ ಅರ್ಚಕರು ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸಚಿವ ಮಂಕಾಳ ವೈದ್ಯ ಇದ್ದರು. ಪೂಜೆಯ ಬಳಿಕ ಕುಮಟಾದಲ್ಲಿ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರ ಮತ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಕೈ ನಾಯಕರು ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಮತದಾರರನ್ನು ಸೆಳೆಯಲು ವಿಶೇಷ ಯೋಜನೆಗಳನ್ನು ರೂಪಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆಯ ಕಾವು ಮತ್ತಷ್ಟು ಜೋರಾಗಿದೆ.
ಇದನ್ನೂ ಓದಿ: ಮಾದಪ್ಪನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹ: 25 ದಿನದಲ್ಲಿ ₹3 ಕೋಟಿ ಕಾಣಿಕೆ - Malemahadeshwara Temple