ಬ್ರಾಂಡ್ ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮಗೋಷ್ಟಿ - DCM MEDIA CONFERENCE Live - DCM MEDIA CONFERENCE LIVE

🎬 Watch Now: Feature Video

thumbnail

By ETV Bharat Karnataka Team

Published : Jun 11, 2024, 12:44 PM IST

Updated : Jun 11, 2024, 1:30 PM IST

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕನಸಿನ ಯೋಜನೆಯಾಗಿರುವ ಬ್ರಾಂಡ್​​ ಬೆಂಗಳೂರಿನಡಿ ​ರಾಜಧಾನಿ ಬೆಂಗಳೂರು ನಗರವನ್ನು ಸುಂದರವನ್ನಾಗಿ ಮಾಡಲು ಎಲ್ಲಾ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಸಂಬಂಧ ಸಾರ್ವಜನಿಕರಿಂದ ಬಂದ ಸಲಹೆಗಳನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರುತ್ತಿದ್ದಾರೆ.ಬ್ರಾಂಡ್ ಬೆಂಗಳೂರು, ಬೆಂಗಳೂರು ಅಭಿವೃದ್ಧಿ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಾಧ್ಯಮಗೋಷ್ಟಿಯನ್ನು ನಡೆಸುತ್ತಿದ್ದಾರೆ. ನಿನ್ನೆ ಬೆಂಗಳೂರು ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಭೆ ನಡೆಸಿದ್ದರು. ಈ ವೇಳೆ ಬೆಂಗಳೂರಿಗೆ ಅನುದಾನ, ಮಳೆ ಅವಾಂತರ, ಬ್ರಾಂಡ್ ಬೆಂಗಳೂರು ಸಂಬಂಧ ಚರ್ಚೆ ನಡೆಸಲಾಗಿತ್ತು.ರಾಜಕಾಲುವೆ ಒತ್ತುವರಿ ತೆರವು, ಕೆರೆಗಳ ಹೂಳೆತ್ತುವುದು ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದರು. ರಾಜ್ಯ ಸರ್ಕಾರ ಮತ್ತು ಪಾಲಿಕೆಯಿಂದ ಬ್ಯಾಂಡ್ - ಬೆಂಗಳೂರಿನ ಅಡಿ ಸಿಲಿಕಾನ್ ಸಿಟಿಯನ್ನು ಸುಂದರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇತ್ತೀಚೆಗೆ ಬೆಂಗಳೂರು ಹಬ್ಬವನ್ನು ಸಹ ಆಚರಿಸಿ ನಗರದ ಹಲವು ರಸ್ತೆಗಳು, ಜಂಕ್ಷನ್ ಕಟ್ಟಡಗಳನ್ನು ಸುಂದರಗೊಳಿಸಿ ವಿದ್ಯುತ್ ಅಲಂಕಾರದಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ರಾಜ್ಯ ಸರ್ಕಾರ ಮತ್ತು ಪಾಲಿಕೆಯಿಂದ ಬ್ಯಾಂಡ್ - ಬೆಂಗಳೂರಿನ ಅಡಿ ಸಿಲಿಕಾನ್ ಸಿಟಿಯನ್ನು ಸುಂದರಗೊಳಿಸುವ ಪ್ರಯತ್ನ ನಡೆಯುತ್ತಿದೆ.
Last Updated : Jun 11, 2024, 1:30 PM IST

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.