LIVE: ಬೆಂಗಳೂರಿನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಮಾಧ್ಯಮಗೋಷ್ಟಿ - Dingaleshwara Swamiji
🎬 Watch Now: Feature Video
Published : Apr 8, 2024, 11:35 AM IST
|Updated : Apr 8, 2024, 12:24 PM IST
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಧಾರವಾಡ ಕ್ಷೇತ್ರದಲ್ಲಿ ಬೆಳವಣಿಗೆಗಳ ಕುರಿತಂತೆ ಶಿರಹಟ್ಟಿ ಭಾವೈಕ್ಯತಾ ಮಹಾ ಸಂಸ್ಥಾನ ಪೀಠದ ಮಹರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು ಮಾಧ್ಯಮಗೋಷ್ಟಿ ನಡೆಸುತ್ತಿದ್ದಾರೆ. ಬೆಂಗಳೂರಿನ ವೀರಶೈವ ಲಿಂಗಾಯತ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಶ್ರೀಗಳು ಮಾತನಾಡುತ್ತಿದ್ದಾರೆ.ಇತ್ತೀಚೆಗೆ ಧಾರವಾಡದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ್ದ ದಿಂಗಾಲೇಶ್ವರ ಶ್ರೀಗಳು, ಧಾರವಾಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಜೋಶಿ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದರು. ''ಧಾರವಾಡದಲ್ಲಿ ಭಕ್ತರ ಸಭೆ ಕರೆದು ಚರ್ಚೆ ಮಾಡಲಾಗಿದ್ದು, ಎಲ್ಲರೂ ಸೇರಿ ಒಂದು ತೀರ್ಮಾನ ಮಾಡಿದ್ದಾರೆ. ನಾನು ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಉತ್ತರ ಭಾರತದ ರೀತಿಯಲ್ಲಿ ಇಲ್ಲಿಯೂ ಬದಲಾವಣೆ ಆಗಬೇಕು. ಎಲ್ಲರೂ ಸಹ ನನಗೆ ಕರೆ ಮಾಡಿ ಮುಂದಿಟ್ಟ ಹೆಜ್ಜೆ ಹಿಂದಿಡದಂತೆ ಹೇಳಿದ್ದಾರೆ'' ಎಂದು ತಿಳಿಸಿದ್ದರು. ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಯವರನ್ನು ಬದಲಾವಣೆ ಮಾಡಬೇಕೆಂದು ಎಲ್ಲ ಮುಖಂಡರ ಸಭೆ ಕರೆದಾಗ, ಕೆಲವರು ಬದಲಾವಣೆ ಬೇಡ ಎಂದು ಹೇಳಿದರು. ಆದರೆ, ನಾವು ಯಾವುದೇ ಒತ್ತಡ ಹಾಗೂ ಆಮಿಷಕ್ಕೆ ಮಣಿಯುವುದಿಲ್ಲ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದರು. ನಮ್ಮ ಗುರುಗಳು ಮತ್ತು ಭಕ್ತರ ನಿರ್ಣಯ ಪಡೆದು, ಅತೀ ಶೀಘ್ರದಲ್ಲೇ ಬೆಂಗಳೂರಿನಲ್ಲಿ ನನ್ನ ತೀರ್ಮಾನ ತಿಳಿಸುತ್ತೇನೆ ಎಂದು ಹೇಳಿದ್ದರು.
Last Updated : Apr 8, 2024, 12:24 PM IST