ಶಿವಮೊಗ್ಗ: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ, 8ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿ - Fire Accident - FIRE ACCIDENT

🎬 Watch Now: Feature Video

thumbnail

By ETV Bharat Karnataka Team

Published : Jul 2, 2024, 7:15 AM IST

ಶಿವಮೊಗ್ಗ: ಗಾಂಧಿಬಜಾರ್​ನ ಬಟ್ಟೆ ಮಾರ್ಕೆಟ್​ನಲ್ಲಿ ಅಗ್ನಿಅವಘಡ ಸಂಭವಿಸಿದ್ದು, 8ಕ್ಕೂ ಅಧಿಕ ಬಟ್ಟೆ ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಸೋಮವಾರ ರಾತ್ರಿ 10:30ರ ಸುಮಾರಿಗೆ ಘಟನೆ ನಡೆದಿದೆ. 

ಬಸವಣ್ಣ ದೇವಾಲಯದ ಹಿಂಭಾಗದ ಬಟ್ಟೆ ಮಾರ್ಕೆಟ್​ನ ಪ್ರವೇಶ ದ್ವಾರದ ಸಮೀಪ ಇರುವ ಟೆಂಟ್ ಅಂಗಡಿಯಲ್ಲಿ ಮೊದಲು ಬೆಂಕಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿತು. ಸ್ಥಳೀಯರು ತಕ್ಷಣ ಮೆಸ್ಕಾಂ ಕಚೇರಿಗೆ ಕರೆ ಮಾಡಿ, ವಿದ್ಯುತ್ ಸಂಪರ್ಕ‌ ಕಡಿತಗೊಳಿಸಿದ್ದಾರೆ. ನಂತರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. 

ಈ ಕುರಿತು ಶಾಸಕ ಚನ್ನಬಸಪ್ಪ ಪ್ರತಿಕ್ರಿಯಿಸಿ, "ಸಂಭಾವ್ಯ ದೊಡ್ಡ ಅವಘಡ ತಪ್ಪಿದೆ. ಯಾವುದೇ ಜೀವಹಾನಿಯಾಗಿಲ್ಲ" ಎಂದು ಮಾಹಿತಿ ನೀಡಿದರು.

ಸ್ಥಳೀಯ ನಿವಾಸಿ ಶಂಕರ್​ ಮಾತನಾಡಿ, "ಇಲ್ಲಿ ಎಷ್ಟು ಅಂಗಡಿಗಳಿಗೆ ಬೆಂಕಿ ಬಿದ್ದಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಬೆಳಗ್ಗೆ ನೋಡಬೇಕು. ಸುಮಾರು‌ ಎಂಟು ಅಂಗಡಿಗಳು ಸುಟ್ಟು ಹೋಗಿವೆ ಎಂಬ ಮಾಹಿತಿ ಬಂದಿದೆ" ಎಂದರು. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗುಂಡ್ಲುಪೇಟೆ ಠಾಣೆ ಆವರಣದಲ್ಲಿ ಪೊಲೀಸರು ಸಾಕಿದ್ದ ನಾಯಿಯಿಂದ ಮೂವರಿಗೆ ಕಡಿತ - dog bite

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.