ಬೆಂಗಳೂರಲ್ಲಿ ಹೊತ್ತಿ ಉರಿದ ಸ್ಕ್ರ್ಯಾಪ್ ಗೋದಾಮು: ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ ಬೆಂಕಿ - Short circuit in scrap warehouse
🎬 Watch Now: Feature Video
Published : Mar 12, 2024, 7:02 AM IST
ಬೆಂಗಳೂರು: ಹೆಗ್ಗನಹಳ್ಳಿಯಲ್ಲಿರುವ ಕರೀಬ್ ಸಾಬ್ ಲೇಔಟ್ನ ಸ್ಕ್ರ್ಯಾಪ್ ಗೋದಾಮಿನಲ್ಲಿ ಶಾರ್ಟ್ ಸಕ್ಯೂರ್ಟ್ನಿಂದ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಪಕ್ಕದಲ್ಲಿದ್ದ ಮನೆಗಳಿಗೆ ಹಬ್ಬಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 8 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸ್ಕ್ರ್ಯಾಪ್ ಗೋಡೌನ್ನಲ್ಲಿ ಶಾರ್ಟ್ ಸಕ್ಯೂರ್ಟ್ನಿಂದ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಧಗಧಗನೆ ಉರಿದು ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿತು. ತಮ್ಮ ತಮ್ಮ ಮನೆಗಳಿಗೆ ಬೆಂಕಿ ಹರಡುತ್ತಿದ್ದಂತೆ ಮನೆಯಲ್ಲಿದ್ದ ಎಲ್ಲರೂ ಹೊರ ಬಂದು ಕಿರುಚಾಡಲು ಶುರು ಮಾಡಿದರು. ಘಟನೆಯಿಂದ ಕೆಲ ಮನೆಗಳಿಗೆ ಹಾನಿ ಉಂಟಾಗಿದೆ. ಇನ್ನು ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ.
ಮೋಟಾರು ಗ್ಯಾರೇಜ್‌ನಲ್ಲಿ ಬೆಂಕಿಯಿಂದ ನಾಲ್ವರಿಗೆ ಗಾಯ : ಮೊನ್ನೆಯಷ್ಟೇ ಅಂದ್ರೆ ಮಾರ್ಚ್ 9ರಂದು ಬೆಂಗಳೂರಿನ ಮಾಗಡಿ ರೋಡ್ ಠಾಣಾ ವ್ಯಾಪ್ತಿಯ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಮೋಟಾರು ಗ್ಯಾರೇಜ್‌ನಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದರು. ವೆಲ್ಡಿಂಗ್ ಕೆಲಸಕ್ಕೆ ಬಳಸುವ ಗ್ಯಾಸ್ ಟ್ಯಾಂಕ್ ಸ್ಫೋಟಗೊಂಡದ್ದರಿಂದ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿತ್ತು.
ಇದನ್ನೂ ಓದಿ : ಬೆಂಗಳೂರಿನಲ್ಲಿ ಅಗ್ನಿ ಅವಘಡ; ವೆಲ್ಡಿಂಗ್ ಗ್ಯಾಸ್ ಟ್ಯಾಂಕರ್ ಸ್ಫೋಟ ಶಂಕೆ