ಬಿಆರ್​ಟಿಯಲ್ಲಿ ಬೆಂಕಿ: 50ಕ್ಕೂ ಹೆಚ್ಚು ಎಕರೆ ಕಾಡು ಭಸ್ಮ‌ - DCF Deep J Contractor

🎬 Watch Now: Feature Video

thumbnail

By ETV Bharat Karnataka Team

Published : Mar 4, 2024, 9:17 PM IST

ಚಾಮರಾಜನಗರ : ಬಿಆರ್​ಟಿ ಸಂರಕ್ಷಿತ ಪ್ರದೇಶದಲ್ಲಿ ಇಂದು ಬೆಂಕಿ ಕಾಣಿಸಿಕೊಂಡು 50ಕ್ಕೂ ಹೆಚ್ಚು ಎಕರೆ ಪ್ರದೇಶ ಸುಟ್ಟು ಕರಕಲಾಗಿರುವ ಘಟನೆ ಚಾಮರಾಜನಗರ ತಾಲೂಕಿನ‌ ಪುಣಜನೂರು ವಲಯದಲ್ಲಿ ನಡೆದಿದೆ.  ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ 3 ಕಡೆ ಬೆಂಕಿ ಬಿದ್ದಿದ್ದು, ಎರಡು ಕಡೆ ಬೆಂಕಿ ಹತೋಟಿಗೆ ಬಂದಿದೆ. ಒಂದು ಕಡೆ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. 

ಈ‌ ಕುರಿತು ಬಿಆರ್​ಟಿ ಡಿಸಿಎಫ್ ದೀಪ್ ಜೆ ಕಂಟ್ರಾಕ್ಟರ್ ಮಾತನಾಡಿ, ಪುಣಜನೂರು ವಲಯದ ಮೂರು ಕಡೆ ಬೆಂಕಿ ಬಿದ್ದಿತ್ತು.‌ 2 ಕಡೆ ಬೆಂಕಿ ನಂದಿಸಲಾಗಿದ್ದು, 1 ಕಡೆ ಬೆಂಕಿ ನಂದಿಸಲಾಗುತ್ತಿದೆ. ಗ್ರೌಂಡ್ ಫೈರ್ ಆಗಿದ್ದು, 40 - 50 ಎಕರೆ ಪ್ರದೇಶದಲ್ಲಿ ಬೆಂಕಿ ಬಿದ್ದಿದೆ ಎಂದು ತಿಳಿಸಿದ್ದಾರೆ.

ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣು ಗುಂಡಿಯ ಗುಡ್ಡದಲ್ಲಿ ಬೆಂಕಿ ಹೊತ್ತಿ ಉರಿದು ನೂರಾರು ಎಕರೆ ಪ್ರದೇಶ ಸಂಪೂರ್ಣ (ಫೆಬ್ರವರಿ 19, 24) ನಾಶವಾಗಿತ್ತು.  ಕೆಮ್ಮಣ್ಣುಗುಂಡಿ ಝಡ್ ಪಾಯಿಂಟ್ ಸಮೀಪದ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಗುಡ್ಡ ಭದ್ರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಬೆಂಕಿ ಧಗಧಗನೆ ಹೊತ್ತಿ ಉರಿಯುತ್ತಿರುವ ಕಾರಣ ಸಸ್ಯ ರಾಶಿ ಸೇರಿದಂತೆ ನೂರಾರು ಎಕರೆ ಗುಡ್ಡ ಪ್ರದೇಶ ನಾಶವಾಗಿತ್ತು. 

ಇದನ್ನೂ ಓದಿ :  ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : ವಿಡಿಯೋ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.