ಹೆಚ್. ಡಿ. ಕುಮಾರಸ್ವಾಮಿ ತುರ್ತು ಮಾಧ್ಯಮಗೋಷ್ಟಿ - LIVE - H D Kumaraswamy Press Meet - H D KUMARASWAMY PRESS MEET
🎬 Watch Now: Feature Video
Published : May 7, 2024, 11:45 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ತುರ್ತು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಶರವಣ ಸೇರಿದಂತೆ ಜೆಡಿಎಸ್ ನಾಯಕರು ಉಪಸ್ಥಿತರಿದ್ದಾರೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ ಕುಮಾರಸ್ವಾಮಿ ಅವರು ತುರ್ತು ಮಾಧ್ಯಮಗೋಷ್ಟಿ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಮಾಧ್ಯಮಗೋಷ್ಟಿಯಲ್ಲಿ ರಾಜ್ಯವ್ಯಾಪಿ ಪ್ರತಿಭಟನೆಯ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇದೆ.ಕೆಲವು ಮುಖಂಡರು ಹೆಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ರಾಜ್ಯ ಸರ್ಕಾರ ತುಂಬಾ ಕೀಳಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಜೆಡಿಎಸ್ ಪಕ್ಷ, ಇಂದಿನಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆಗೆ ಲೋಕಸಭೆ ಚುನಾವಣೆ ಮಾಡಿಕೊಂಡಿರುವ ಮೈತ್ರಿ ಪಕ್ಷ ಬಿಜೆಪಿ ಕೂಡ ಬೆಂಬಲ ನೀಡುವ ಸಾಧ್ಯತೆ ಇದೆ. ಜೆಡಿಎಸ್ ಕಚೇರಿ ಜೆಪಿ ಭವನದ ಬಳಿ ಮಂಗಳವಾರ ಬೃಹತ್ ಪ್ರತಿಭಟನೆ ಕೂಡ ನಡೆಸಲಾಯಿತು.