LIVE: ದೆಹಲಿಯಲ್ಲಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೇರಪ್ರಸಾರ - MANMOHAN SINGH LAST RITES

🎬 Watch Now: Feature Video

thumbnail

By ETV Bharat Karnataka Team

Published : Dec 28, 2024, 10:05 AM IST

ನವದೆಹಲಿ: ಗುರುವಾರ ರಾತ್ರಿ ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯುತ್ತಿದೆ. ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು, ಕೇಂದ್ರ ಸರ್ಕಾರದಿಂದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಅಂತಿಮ ಸಂಸ್ಕಾರವು ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದೆ. ಸೇನಾ ಗೌರವಗಳೊಂದಿಗೆ ಅಂತಿಮ ವಿದಾಯ ಹೇಳಲಾಗುತ್ತಿದೆ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಶನಿವಾರ ಬೆಳಗ್ಗೆ 8 ಗಂಟೆಗೆ ಅಲ್ಲಿಂದ ಎಐಸಿಸಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನರ ಭೇಟಿಗಾಗಿ ಬೆಳಗ್ಗೆ 9.30ರವರೆಗೆ ಅಲ್ಲಿಯೇ ಇರಿಸಲಾಗಿತ್ತು. ಬಳಿಕ ಅಲ್ಲಿಂದ ಅಂತಿಮ ಯಾತ್ರೆ ಆರಂಭವಾಯಿತು. ಹಲವು ಸುಧಾರಣೆಗಳ ಮೂಲಕ ರಾಷ್ಟ್ರವನ್ನು ಹೊಸ ಹಾದಿಯಲ್ಲಿ ಮುನ್ನಡೆಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶಾದ್ಯಂತ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮುಂತಾದವರು ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮನಮೋಹನ್ ಅವರು ದೇಶಕ್ಕೆ ಸಲ್ಲಿಸಿದ ಸೇವೆಗಳನ್ನು ಸ್ಮರಿಸಿದರು. 

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.