ದಕ್ಷಿಣಕಾಶಿ ನಂಜನಗೂಡಿನಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು - Girija Kalyana
Published : Jul 11, 2024, 7:25 PM IST
ಮೈಸೂರು: ದಕ್ಷಿಣಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಗಿರಿಜಾ ಕಲ್ಯಾಣ ಸಂಭ್ರಮ ಮನೆ ಮಾಡಿದೆ. ಒಂದು ವಾರಗಳ ಕಾಲ ಸಂಭ್ರಮದ ಗಿರಿಜಾ ಕಲ್ಯಾಣ ಮಹೋತ್ಸವ ನಡೆಯಲಿದ್ದು, ಸಹಸ್ರಾರು ಭಕ್ತರು ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಕಳೆದ (ಬುಧವಾರ) ರಾತ್ರಿಯಿಂದ ಆರಂಭವಾದ ಗಿರಿಜಾ ಕಲ್ಯಾಣ ಮಹೋತ್ಸವದ ಪೂಜಾ ಕೈಂಕರ್ಯಗಳು ದೇವಸ್ಥಾನದ ಮುಖ್ಯ ಅರ್ಚಕರಾದ ನಾಗಚಂದ್ರ ಧೀಕ್ಷಿತ್ ಅವರ ನೇತೃತ್ವದಲ್ಲಿ ಆರಂಭವಾಗಿದೆ. ಕಲ್ಯಾಣ ಮಹೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.
ನಂಜುಂಡೇಶ್ವರ ಹಾಗೂ ಪಾರ್ವತಿ ದೇವಿಯವರ ಉತ್ಸವ ಮೂರ್ತಿಗಳನ್ನ ದೇವಸ್ಥಾನದ ಆವರಣದಲ್ಲಿರುವ ಕಲ್ಯಾಣ ಮಂಟಪದಲ್ಲಿ ಪ್ರತಿಷ್ಠಾಪಿಸಿ ನೆರವೇರಿಸಲಾಯಿತು. ಪ್ರತಿವರ್ಷ ಆಷಾಢ ಮಾಸದಲ್ಲಿ ಈ ಗಿರಿಜಾ ಕಲ್ಯಾಣ ಮಹೋತ್ಸವ ನೆರವೇರಿಸಲಾಗುತ್ತದೆ. ನಿನ್ನೆ ರಾತ್ರಿಯಿಂದಲೇ ಆರಂಭವಾದ ಕಲ್ಯಾಣ ಮಹೋತ್ಸವವನ್ನ ಕಣ್ತುಂಬಿಕೊಳ್ಳಲು ನಾಡಿನ ವಿವಿದ ಭಾಗಗಳಿಂದ ಭಕ್ತರು ಆಗಮಿಸಿದ್ದರು. ನಿತ್ಯ ವಿಶೇಷ ಪೂಜೆಗಳೊಂದಿಗೆ ಗಿರಿಜಾ ಕಲ್ಯಾಣ ಮಹೋತ್ಸವ ನೆರವೇರಲಿದೆ. ವಿವಿಧ ಬಗೆಯ ಜಾನಪದ ಕಲಾ ತಂಡಗಳು ವಿವಾಹ ಮಹೋತ್ಸವಕ್ಕೆ ಮೆರಗು ತಂದವು. ದೂರದೂರಿಂದ ಬಂದ ಸಹಸ್ರಾರು ಭಕ್ತರು ಕಲ್ಯಾಣ ಮಹೋತ್ಸವವನ್ನು ಕಣ್ತುಂಬಿಕೊಂಡರು. ದೇವಸ್ಥಾನವನ್ನು ಅಲಂಕರಿಸಲಾಗಿತ್ತು.
ಇದನ್ನೂ ಓದಿ: ಸಂಕಷ್ಟಿ ಚತುರ್ಥಿ ಏಕೆ ಆಚರಿಸುತ್ತಾರೆ?: ಶಾಸ್ತ್ರಗಳ ಪ್ರಕಾರ ವ್ರತದ ಹಿನ್ನೆಲೆ ಏನು? - Sankatahara Chaturthi 2024