ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರ ವಶಕ್ಕೆ - Diamonds seized - DIAMONDS SEIZED
🎬 Watch Now: Feature Video


Published : Mar 27, 2024, 7:56 PM IST
ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಪ್ರತಿ ತಾಲೂಕು ಗಡಿಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಚೆಕ್ ಪೋಸ್ಟ್ ಮೂಲಕ ಹಾದು ಹೋಗುವ ಪ್ರತಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇಂದು ನಡೆಸಿದ ತಪಾಸಣೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ವಜ್ರ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್ನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
6 ಕೆಜಿ 586 ಗ್ರಾಂ ಚಿನ್ನ, 1 ಕೆಜಿ 873 ಗ್ರಾಂ ಬೆಳ್ಳಿ ಹಾಗೂ ಬೆಲೆ ಬಾಳುವ ವಜ್ರ ಸೇರಿದಂತೆ ಸುಮಾರು 4 ಕೋಟಿಗೂ ಅಧಿಕ ಮೌಲ್ಯದ ಸ್ವತ್ತು ಇದಾಗಿದೆ ಎಂದು ಅಂದಾಜು ಮಾಡಲಾಗಿದೆ. ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಈ ಸ್ವತ್ತನ್ನು ಇದೀಗ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಕ್ ಪೋಸ್ಟ್ ಇದನ್ನು ಸೀಸ್ ಮಾಡಲಾಗಿದೆ. ವಾಹನಗಳ ಪರಿಶೀಲನೆ ವೇಳೆ ದಾಖಲೆ ನೀಡದ ಹಿನ್ನೆಲೆ ವಶಕ್ಕೆ ಪಡೆಯಲಾಗಿದ್ದು, ತೆರಿಗೆ ಇಲಾಖೆಗೆ ಪ್ರಕರಣ ತನಿಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ. ಎಂಸಿ ಹಳ್ಳಿ ಚೆಕ್ ಪೋಸ್ಟ್ನಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಬಾರಿ ದೊಡ್ಡ ಮೊತ್ತದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಸರ್ಕಾರಿ ಬಸ್ನಲ್ಲಿ ದಾಖಲೆ ಇಲ್ಲದ ಚಿನ್ನಾಭರಣಗಳ ಸಾಗಾಟ: ಅಧಿಕಾರಿಗಳಿಂದ ಸೀಜ್ - Gold Seized