ಹೆಚ್ ಡಿ ಕುಮಾರಸ್ವಾಮಿ ಮಾಧ್ಯಮಗೋಷ್ಟಿ - ನೇರಪ್ರಸಾರ - HDK PressMeet - HDK PRESSMEET
🎬 Watch Now: Feature Video
Published : Sep 28, 2024, 11:26 AM IST
|Updated : Sep 28, 2024, 12:56 PM IST
ಬೆಂಗಳೂರು: ಕೇಂದ್ರದ ಭಾರೀ ಕೈಗಾರಿಕೆ - ಉಕ್ಕು ಖಾತೆ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಈ ವೇಳೆ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಶುಕ್ರವಾರ ಎದುರಿಸಿದ ವಿಚಾರಣೆ ಬಗ್ಗೆ ಮಾತನಾಡಲಿದ್ದಾರೆ. ಹಾಗೆಯೇ ಮುಡಾ ಹಗರಣದ ಬಗ್ಗೆ ಪ್ರಸ್ತಾಪಿಸಲಿದ್ದಾರೆ. ಅಲ್ಲದೆ ಕೆಲ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಗಂಗೇನಹಳ್ಳಿಯ ಬಡಾವಣೆಯ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ನಿನ್ನೆಯಷ್ಟೇ ಕುಮಾರಸ್ವಾಮಿ ಅವರು ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಹೆಚ್ಡಿಕೆ, ಪ್ರಕರಣ ಸಂಬಂಧ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿರಲಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಕಚೇರಿಗೆ ಬಂದು ಹಾಜರಾಗಿದ್ದೇನೆ. ಕುಮಾರಸ್ವಾಮಿ ಅವರಿಗೆ ರಾಜಕೀಯ ಗಂಡಾಂತರ, ಭೂ ಗಂಡಾಂತರ ಎಂದು ಚರ್ಚೆ ನಡೆಯುತ್ತಿದೆ. ಆದರೆ, ನನ್ನ ರಾಜಕೀಯ ಜೀವನದಲ್ಲಿ ಗಂಡಾಂತರ ತಂದುಕೊಳ್ಳುವ ಯಾವುದೇ ಕೆಲಸವನ್ನೂ ಮಾಡಿಲ್ಲ. ರಾಜಕೀಯ ಒತ್ತಡದಿಂದ ನನ್ನ ಮೇಲೆ ಪ್ರಕರಣ ಮುನ್ನೆಲೆಗೆ ತರಲಾಗಿದೆ. ನಾನು ಯಾವುದೇ ಕಾನೂನುಬಾಹಿರ ಆದೇಶ ಮಾಡಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.
Last Updated : Sep 28, 2024, 12:56 PM IST