ಉಡುಪಿ ಜಿಲ್ಲೆಯಾದ್ಯಂತ ಮಳೆಯೋ ಮಳೆ: ಕಮಲಶಿಲೆ, ಮಾರಣಕಟ್ಟೆ ದೇಗುಲಕ್ಕೆ ಜಲ ದಿಗ್ಬಂಧನ - Udupi Rain - UDUPI RAIN
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/04-07-2024/640-480-21867586-thumbnail-16x9-manu.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Jul 4, 2024, 5:55 PM IST
ಉಡುಪಿ: ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿದು ಕೃಷಿ ಭೂಮಿಗೆ ನೀರು ನುಗ್ಗಿದೆ.
ದೇಗುಲಗಳಿಗೆ ಜಲ ದಿಗ್ಬಂಧನ: ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪಶ್ಚಿಮ ಘಟ್ಟದ ತಪ್ಪಲಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇಗುಲ ಜಲಾವೃತಗೊಂಡಿದೆ. ಪ್ರತಿ ವರ್ಷ ಇಲ್ಲಿನ ಕುಜ್ಜ ನದಿ ಭರ್ತಿಯಾಗಿ ಗಂಗೆ ಸ್ಥಾನದ ಮೂಲಕ ದೇಗುಲ ಪ್ರವೇಶಿಸುತ್ತದೆ. ಅದೇ ರೀತಿ ನಿನ್ನೆ ರಾತ್ರಿ ಒಂದು ಗಂಟೆಗೆ ಸರಿಯಾಗಿ ದೇಗುಲದೊಳಗೆ ನೀರು ಪ್ರವೇಶಿಸಿತು. ಅರ್ಚಕರು ಪ್ರಥಮ ಪೂಜೆ ನೆರವೇರಿಸಿದರು.
ಕೊಲ್ಲೂರು ಸಮೀಪದ ಶ್ರೀ ಕ್ಷೇತ್ರ ಮಾರಣಕಟ್ಟೆ ದೇಗುಲದ ಆವರಣಕ್ಕೂ ನೀರು ನುಗ್ಗಿ ಕೃತಕ ನೆರೆ ಉಂಟಾಯಿತು. ಬೈಂದೂರು ಪರಿಸರದ ಸುತ್ತಮುತ್ತಲಿನಲ್ಲಿ ಮನೆಗಳು ಹಾಗೂ ಜಮೀನಿಗಳಿಗೆ ನೀರು ನುಗ್ಗಿದೆ. ಜನರನ್ನು ದೋಣಿಯ ಮೂಲಕ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಯಿತು.
ಬೆಂಗಳೂರಿನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ದೂರವಾಣಿ ಕರೆ ಮೂಲಕ ಚರ್ಚಿಸಿದರು. ಜಿಲ್ಲೆಯ ಅಮಾವಾಸೆಬೈಲು ಸೇರಿದಂತೆ ಕೆಲವೆಡೆ ಮಳೆ, ಗಾಳಿಯಿಂದ ಉಂಟಾಗಿರುವ ಹಾನಿಯ ಮಾಹಿತಿ ಪಡೆದರು. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು. ಇದೇ ವೇಳೆ ಪರಿಹಾರಕ್ಕೆ ಕ್ರಮಗಳನ್ನು ಕೈಗಳ್ಳುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ: ಭಾರೀ ಮಳೆ; ಬೆಳ್ತಂಗಡಿ, ಬಂಟ್ವಾಳ, ಬೈಂದೂರು ಶಾಲೆಗಳಿಗೆ ರಜೆ ಘೋಷಣೆ - Holiday for Schools