ಉಡುಪಿ - ದಕ್ಷಿಣಕನ್ನಡದಲ್ಲಿ ವರುಣನ ಆರ್ಭಟ: ಆರೆಂಜ್​ ಅಲರ್ಟ್​ ಘೋಷಣೆ - HEAVY RAIN IN COASTEL KARNATAKA

By ETV Bharat Karnataka Team

Published : Jun 26, 2024, 1:04 PM IST

thumbnail
ಉಡುಪಿ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ (ETV Bharat)

ಮಂಗಳೂರು: ಕಳೆದ ಎರಡು ದಿನಗಳಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಗಾಲ ಆರಂಭವಾದಾಗಿನಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದೆ. ಆದರೆ ಕಳೆದೆರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಈ ಹಿಂದೆ ಎರಡು ಮೂರು ಬಾರಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಎಡೆಬಿಡದೆ ಸುರಿಯುತ್ತಿರುವ ಅಬ್ಬರದ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನದಿಗಳು ತುಂಬಿದ್ದು, ನೆರೆ ಭೀತಿ ಎದುರಾಗಿದೆ.

ಉಡುಪಿಯಲ್ಲೂ ವರುಣನ ಆರ್ಭಟ ಮುಂದುವರೆದಿದ್ದು, ಭರ್ಜರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರ -ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ಸಂದೇಶವನ್ನು ರವಾನೆ ಮಾಡಲಾಗಿದೆ. ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ಕೆಲ ಪ್ರದೇಶಗಳಲ್ಲಿ ಗಿಡ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನದಿಗಳಲ್ಲಿ ನೀರಿನ ಪ್ರಮಾಣವು ಹೆಚ್ಚಾಗಿದ್ದು ಸಮುದ್ರದಲ್ಲಿ ಅಲೆಗಳ ಅಬ್ಬರುವೂ ಜೋರಾಗಿದೆ. ಹಾಗಾಗಿ ನದಿ ಮತ್ತು ಸಮುದ್ರ ತೀರದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. 

ಇದನ್ನೂ ಓದಿ: ಮಲೆನಾಡಿನಲ್ಲೇ ವರುಣನ ಕಣ್ಣಾ ಮುಚ್ಚಾಲೆ: ಮಳೆ ಹೆಚ್ಚು- ಕಡಿಮೆಯಾಗಲು ಹವಾಮಾನ ವೈಪರೀತ್ಯ ಕಾರಣವೇ..? - Reason for Decrease in Rainfall

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.