LIVE: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.. ನಿಮ್ಮ ರಿಸಲ್ಟ್​​ ನೋಡಲು ಈ ಕೆಳಗಿನ ವೆಬ್​​ಸೈಟ್​​ಗಳಿಗೆ ಭೇಟಿ ನೀಡಿ - Puc Results - PUC RESULTS

🎬 Watch Now: Feature Video

thumbnail

By ETV Bharat Karnataka Team

Published : Apr 10, 2024, 10:23 AM IST

Updated : Apr 10, 2024, 10:49 AM IST

ಬೆಂಗಳೂರು: 2024 ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.ಮಾರ್ಚ್​​ 1 ರಿಂದ 22 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. 1,124 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬೆಳಗ್ಗೆ 11 ಗಂಟೆ ಬಳಿಕ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿಯೂ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಸೇರಿದಂತೆ ಎಲ್ಲ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟ ಮಾಡಲಾಗುತ್ತಿದೆ. ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರಾಜ್ಯಾದ್ಯಂತ ಒಟ್ಟು 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,30,644 ಮಂದಿ ಬಾಲಕರು ಹಾಗೂ 3,67,980 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ. ಮಾರ್ಚ್​​ 25 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭ ಆಗಿತ್ತು. ಈಗ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಅಂಕಗಳನ್ನು ಕಂಪ್ಯೂಟರೀಕರಣ ಮಾಡಲಾಗಿದೆ.ಇದನ್ನೂ ಓದಿ: 2024-25ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ 
Last Updated : Apr 10, 2024, 10:49 AM IST

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.