2ನೇ ದಿನದ ವಿಧಾನಸಭೆ ಮುಂಗಾರು ಅಧಿವೇಶನ: ನೇರಪ್ರಸಾರ - Assembly Session - ASSEMBLY SESSION

🎬 Watch Now: Feature Video

thumbnail

By ETV Bharat Karnataka Team

Published : Jul 16, 2024, 10:22 AM IST

Updated : Jul 16, 2024, 3:56 PM IST

ಬೆಂಗಳೂರು: ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನವು ಎರಡನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ನಡೆದ ಮೊದಲ ದಿನದ ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷಗಳು ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದವು. ಪ್ರತಿಪಕ್ಷ ನಾಯಕ ಆರ್.ಅಶೋಕ್, ವಾಲ್ಮೀಕಿ ಹಗರಣದಲ್ಲಿ ನೂರಾರು ಕೋಟಿ ಲೂಟಿಯಾಗಿದೆ. ಚರ್ಚೆಗೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದ್ದರು. ಈ ಸಂದರ್ಭ ಸದನದಲ್ಲಿ ಪ್ರತಿಪಕ್ಷ ಸದಸ್ಯರು ಹಾಗೂ ಆಡಳಿತ ಪಕ್ಷ ಸದಸ್ಯರಿಂದ ಗದ್ದಲ ಉಂಟಾಗಿತ್ತು. ಈ ವೇಳೆ ಎದ್ದುನಿಂತ ಸಿಎಂ ಸಿದ್ದರಾಮಯ್ಯ, ನಾವು ಎಲ್ಲ ಚರ್ಚೆಗೆ ಸಿದ್ಧರಿದ್ದೇವೆ. ನಿಯಮಾವಳಿ ಪ್ರಕಾರ ಚರ್ಚೆ ಮಾಡಬೇಕು. ಎಲ್ಲ ಚರ್ಚೆಗೂ ನಮ್ಮ ಸರ್ಕಾರ ಉತ್ತರ ಕೊಡಲು ಸಿದ್ಧವಿದೆ. ಬಿಜೆಪಿಗೆ ಹಗರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇವರ ಕಾಲದಲ್ಲಿ ಅದೆಷ್ಟು ಲೂಟಿ ಹೊಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಅಧಿವೇಶನ ಆರಂಭಕ್ಕೂ ಮುನ್ನ ವಾಲ್ಮೀಕಿ ನಿಗಮದಲ್ಲಿನ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಎಂದು ಆಗ್ರಹಿಸಿ ಶಾಸಕರ ಭವನದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಕೂಡ ನಡೆಸಿದ್ದರು. ಎರಡನೇ ದಿನವಾದ ಇಂದೂ ಕೂಡ ಹಗರಣ ವಿಚಾರ ಸದ್ದು ಮಾಡುವ ಸಾಧ್ಯತೆ ಇದೆ. ಜುಲೈ 26ರವರೆಗೆ ಒಟ್ಟು 9 ದಿನಗಳ ಕಾಲ ರಾಜ್ಯ ಮುಂಗಾರು ಅಧಿವೇಶನ ಇರಲಿದೆ. 
Last Updated : Jul 16, 2024, 3:56 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.