ಕರ್ನಾಟಕ ವಿಧಾನಸಭೆ ಅಧಿವೇಶನದ ನೇರ ಪ್ರಸಾರ - ವಿಧಾನಸಭೆ ಅಧಿವೇಶನ
🎬 Watch Now: Feature Video
Published : Feb 13, 2024, 10:41 AM IST
|Updated : Feb 13, 2024, 5:43 PM IST
ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಅಧಿವೇಶನ ಸೋಮವಾರ (ಫೆ.12) ದಿಂದ ಆರಂಭವಾಗಿದ್ದು, ಇಂದು ಎರಡನೇ ದಿನದ ಕಲಾಪ ನಡೆಯುತ್ತಿದೆ. ನಿನ್ನೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದ್ದರು. ಫೆ.16 ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಆ ಬಳಿಕ ಫೆ.23ರ ವರೆಗೆ ಸದನದಲ್ಲಿ ಚರ್ಚೆ ಮುಂದುವರಿಯಲಿದೆ.
ಸೋಮವಾರ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರನ್ನು ಬೀಳ್ಕೊಟ್ಟ ನಂತರ ವಿಧಾನಸಭೆ ಕಲಾಪ ಸಮಾವೇಶಗೊಂಡಾಗ ಸ್ಪೀಕರ್ ಯು.ಟಿ.ಖಾದರ್ ಅವರು ಸಂವಿಧಾನದ ಪೀಠಿಕೆ ಪ್ರಸ್ತಾವನೆಯನ್ನು ಬೋಧಿಸಿದರು. ನಂತರ ಸಂತಾಪ ಸೂಚಕ ನಿರ್ಣಯವನ್ನು ಸದನದಲ್ಲಿ ಮಂಡಿಸಿದರು. ಮಾಜಿ ಶಾಸಕ ನಾಗನಗೌಡ ಕಂದಕೂರ ಮತ್ತು ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರ ನಿಧನಕ್ಕೆ ನಿನ್ನೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.
ಬರ ನಿರ್ವಹಣೆ ವೈಫಲ್ಯ, ಕಮಿಷನ್ ಆರೋಪ, ಕೇಂದ್ರದ ವಿರುದ್ಧ ಅನುದಾನ ಹಂಚಿಕೆ ತಾರತಮ್ಯ ಆರೋಪ ಕುರಿತು ಉಭಯ ಸದನಗಳಲ್ಲಿ ಪ್ರಸ್ತಾಪಿಸಿ ಹೋರಾಟ ನಡೆಸುವ ನಿರ್ಧಾರವನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಳ್ಳಲಾಗಿದೆ. ಇದರಿಂದಾಗಿ ಕಲಾಪದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಿದ್ಧವಾಗಿದೆ.