LIVE; ವಿಧಾನಸಭೆ ಕಲಾಪದ ನೇರಪ್ರಸಾರ
🎬 Watch Now: Feature Video
ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನವು ಫೆಬ್ರವರಿ 12 ರಿಂದ ಆರಂಭವಾಗಿದ್ದು, ಫೆ.23ರವರೆಗೆ ನಡೆಯಲಿದೆ. ಫೆಬ್ರವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇಂದು 8 ನೇ ದಿನದ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇದರ ನೇರಪ್ರಸಾರ ವೀಕ್ಷಿಸಿ.ಮುಖ್ಯ ಸಿದ್ದರಾಮಯ್ಯ ಅವರು 3,71,383 ಕೋಟಿ ರೂ. ಗಾತ್ರದ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದರು. ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ. ಅನುದಾನ ನೀಡಲಾಗಿದೆ. ಶಿಕ್ಷಣ ಇಲಾಖೆಗೆ 4,44,22 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,406 ಕೋಟಿ ರೂ. ಹಾಗೂ ಇಂಧನ ಇಲಾಖೆಗೆ 23159 ಕೋಟಿ ರೂ. ಮೀಸಲಿಡಲಾಗಿದೆ. ಮಂಗಳವಾರ ವಿಧಾನಸಭೆಯಲ್ಲಿ 2024ನೇ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ, 2024ನೇ ಅಂತರ್ ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ ಸೇರಿದಂತೆ ಹಲವು ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆಯಲಾಗಿದೆ.ಇದನ್ನೂ ಓದಿ: ಪ್ರೀಮಿಯಂ ಎಫ್ಎಆರ್ ಖರೀದಿಸಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸುವ ಮಸೂದೆಗೆ ಅಂಗೀಕಾರ
Last Updated : Feb 21, 2024, 7:16 PM IST