ಕರ್ನಾಟಕ ವಿಧಾನಮಂಡಲ ಅಧಿವೇಶನ: LIVE - Assembly Session - ASSEMBLY SESSION
🎬 Watch Now: Feature Video


Published : Jul 19, 2024, 12:06 PM IST
|Updated : Jul 19, 2024, 3:24 PM IST
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದು 4ನೇ ದಿನಕ್ಕೆ ಕಾಲಿಟ್ಟಿದೆ. ಮೊದಲ ಮೂರು ದಿನದ ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷಗಳು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸರ್ಕಾರದ ಮೇಲೆ ಮುಗಿಬಿದ್ದಿದ್ದವು. ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿದ್ದವು. ಇದರಿಂದ ಸದನದಲ್ಲಿ ಪ್ರತಿಪಕ್ಷ ಮತ್ತು ಸರ್ಕಾರದ ನಡುವೆ ವಾಕ್ಸಮರ ಉಂಟಾಗಿತ್ತು.ಇನ್ನು ಗುರುವಾರದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಚರ್ಚೆಯ ಮೇಲೆ ಸಿಎಂ ಉತ್ತರ ನೀಡಿದರು. ಆದರೆ ಇದಕ್ಕೆ ಪ್ರತಿಪಕ್ಷದ ಸದಸ್ಯರು ಆಕ್ಷೇಪಿಸಿ, ಭಿತ್ತಿಪತ್ರ ಹಿಡಿದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಚಂದ್ರಶೇಖರ್ ಆತ್ಮಹತ್ಯೆ ಎಫ್ಐಆರ್ನಲ್ಲಿ ಸಚಿವರು, ಶಾಸಕರ ಹೆಸರು ಹಾಕಿಲ್ಲ ಎಂದು ಪ್ರತಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿದರು. 'ಲೂಟಿ ಲೂಟಿ' ಎಂಬ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿ ಬಿಜೆಪಿ ಸದಸ್ಯರು ಧಿಕ್ಕಾರ ಕೂಗಿದರು. ಸದನ ಹೊರಗೂ ಬಿಜೆಪಿ ಸದಸ್ಯರು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
Last Updated : Jul 19, 2024, 3:24 PM IST