LIVE: ರಾಜ್ಯ ವಿಧಾನಸಭೆ ಕಲಾಪ - Assembly Session - ASSEMBLY SESSION

🎬 Watch Now: Feature Video

thumbnail

By ETV Bharat Karnataka Team

Published : Jul 24, 2024, 11:15 AM IST

Updated : Jul 24, 2024, 2:13 PM IST

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಇಂದು 8ನೇ ದಿನದ ಕಲಾಪ ನಡೆಯುತ್ತಿದೆ. ಆರಂಭಿಕ 4 ದಿನಗಳೂ ಕೂಡ ಪ್ರತಿಪಕ್ಷಗಳು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೂ ಒತ್ತಾಯ ಕೇಳಿಬಂತು. ಮಂಗಳವಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸಿ ಬೆಂಗಳೂರು ನಗರವನ್ನು 10 ಪಾಲಿಕೆಗಳವರೆಗೆ ವಿಭಜಿಸುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕ - 2024 ಅನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಮಂಡಿಸಿದರು. ಮೇಯರ್‌ ಹಾಗೂ ಉಪ ಮೇಯರ್‌ ಅವಧಿಯನ್ನು 5 ವರ್ಷಕ್ಕೆ ಹೆಚ್ಚಿಸುವುದು, ಪ್ರತಿ ಪಾಲಿಕೆಗಳಲ್ಲಿ ಗರಿಷ್ಠ 200 ವಾರ್ಡ್​ಗಳು ಸೇರಿದಂತೆ ಹಲವು ಮಹತ್ವದ ಅಂಶಗಳುಳ್ಳ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಇದಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ಎಲೆಕ್ಟ್ರಾನಿಕ್‌ ಸಿಟಿ, ಬಿಡದಿ, ಆನೇಕಲ್‌ ಸೇರಿ ಎರಡು ಜಿಲ್ಲೆ ಹಾಗೂ ಸುತ್ತಮುತ್ತಲ ಪ್ರದೇಶಗಳನ್ನು ಸೇರಿಸಿ ಗ್ರೇಟರ್‌ ಬೆಂಗಳೂರು ರಚಿಸಲಾಗುತ್ತಿದೆ. ಈ ವಿಧೇಯಕಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅಶ್ವತ್ಥ ನಾರಾಯಣ್ ಹಾಗು ಸುರೇಶ್ ಕುಮಾರ್ ಸೇರಿದಂತೆ ಬಿಜೆಪಿ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು.
Last Updated : Jul 24, 2024, 2:13 PM IST

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.