ಕರ್ನಾಟಕ ವಿಧಾನಪರಿಷತ್ ಕಲಾಪದ ನೇರ ಪ್ರಸಾರ - Karnataka Budget 2024
🎬 Watch Now: Feature Video
Published : Feb 13, 2024, 10:54 AM IST
|Updated : Feb 13, 2024, 7:40 PM IST
ಬೆಂಗಳೂರು: ಸೋಮವಾರದಿಂದ ಆರಂಭವಾದ ವಿಧಾನ ಮಂಡಲ ಅಧಿವೇಶನ ಫೆ.23ರವರೆಗೆ ನಡೆಯಲಿದೆ. ನಿನ್ನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಸಾಧನೆಗಳ ಬಗ್ಗೆ ಭಾಷಣ ಮಾಡಿದ್ದಾರೆ. ಫೆ.16 ರಂದು ಸಿಎಂ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಳಿಕ ಫೆ.16ರವರೆಗೆ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.
ಇನ್ನು ಉಭಯ ಸದನಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ ಹೆಣೆದಿದೆ. ಹಾಗೆಯೇ ಸರ್ಕಾರ ಕೂಡ ಪ್ರತಿಪಕ್ಷಗಳಿಗೆ ಪ್ರತ್ಯುತ್ತರ ನೀಡಲು ಸಜ್ಜಾಗಿದೆ. ಬರ ನಿರ್ವಹಣೆ ವೈಫಲ್ಯ, ಕಮಿಷನ್ ಆರೋಪ ಕುರಿತು ಉಭಯ ಸದನಗಳಲ್ಲಿ ಪ್ರಸ್ತಾಪಿಸಿ ಹೋರಾಟ ನಡೆಸುವ ನಿರ್ಧಾರವನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೇ ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಶಾಸಕರು ಸಿದ್ಧರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಕೂಡ ಕೇಂದ್ರದ ಬಿಜೆಪಿ ಸರ್ಕಾರ ತಾರತಮ್ಯದ ಬಗ್ಗೆ ಪ್ರಸ್ತಾಪಿಸಿ, ರಾಜ್ಯ ಸರ್ಕಾರದ ಸಾಧನೆಗಳನ್ನು ತೋರಿಸಿ ತಿರುಗೇಟು ನೀಡಲು ಸಜ್ಜಾಗಿದ್ದಾರೆ.
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವುದರಿಂದ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಆರೋಪ ಮತ್ತು ಸರ್ಕಾರದ ಉತ್ತರ ಜೋರಾಗಿರಲಿದೆ.