SSLC ಪರೀಕ್ಷೆ ಫಲಿತಾಂಶ ಪ್ರಕಟ: ಮಾಧ್ಯಮಗೋಷ್ಠಿಯ ನೇರಪ್ರಸಾರ - SSLC Exam Result - SSLC EXAM RESULT
🎬 Watch Now: Feature Video
Published : May 9, 2024, 10:41 AM IST
|Updated : May 9, 2024, 11:19 AM IST
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಲ್ಲಿನ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುತ್ತಿದೆ. ಇದೇ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆ-2ರ ಮಾಹಿತಿಯನ್ನೂ ಕೂಡ ಪ್ರಕಟಿಸಲಾಗುತ್ತಿದೆ.ಮಾಧ್ಯಮಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದಾರೆ.ವಿದ್ಯಾರ್ಥಿಗಳು ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಬೆಳಗ್ಗೆ 10.30 ಗಂಟೆಯ ನಂತರ ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸಬಹುದು.ಎಸ್ಎಸ್ಎಲ್ಸಿ ಪರೀಕ್ಷೆ-1ನ್ನು 2024ರ ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ನಡೆಸಲಾಗಿತ್ತು. ಈ ವೇಳೆ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದತ್ತ ಕೊಂಡೊಯ್ಯಲು ಹಾಗೂ ಸಾಕ್ಷರತಾ ಪ್ರಮಾಣ ಅಧಿಕಗೊಳಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಈ ಬಾರಿ ಮೂರು ಬಾರಿ ನಡೆಸಲು ಸರ್ಕಾರ ನಿರ್ಧರಿಸಿತ್ತು.
Last Updated : May 9, 2024, 11:19 AM IST