ಸ್ಟೇರಿಂಗ್ ರಾಡ್ ತುಂಡಾಗಿ ಕೆಎಸ್ಆರ್ಟಿಸಿ ಬಸ್ ಅಪಘಾತ; ಚಾಲಕ ಸೇರಿ ಹಲವರಿಗೆ ಗಾಯ - KSRTC Bus Accident - KSRTC BUS ACCIDENT
🎬 Watch Now: Feature Video
Published : May 13, 2024, 7:23 AM IST
ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ರಾಡ್ ತುಂಡಾಗಿ ಮಣ್ಣಿನ ದಿಬ್ಬಕ್ಕೆ ಗುದ್ದಿರುವ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆಯಿತು. ಬಸ್ ಚಾಲಕ ದೇವರಾಜ್ ಕಾಲಿಗೆ ಗಂಭೀರ ಗಾಯವಾಗಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಘಟನೆ ತಿಳಿದು ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರಿನಿಂದ ಆಲ್ದೂರಿಗೆ ಬಸ್ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಚಿಕ್ಕಮಗಳೂರು - ಶೃಂಗೇರಿ ರಸ್ತೆಮಾರ್ಗದ ಕೂದುವಳ್ಳಿ ಸಮೀಪ ಘಟನೆ ಸಂಭವಿಸಿದೆ. ರಸ್ತೆ ತಿರುವಿನಲ್ಲಿ ದಿಬ್ಬಕ್ಕೆ ಗುದ್ದಿದ ಬಸ್ ಅಲ್ಲೇ ಬಾಕಿಯಾಗಿತ್ತು. ಇದರಿಂದ ಇತರೆ ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆಯಾಗಿ ರಸ್ತೆಯುದ್ದ ಟ್ರಾಫಿಕ್ ಜಾಮ್ ಉಂಟಾಯಿತು.
ಈ ರಸ್ತೆಮಾರ್ಗ ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಒದಗಿಸುವ ರಾಷ್ಟ್ರೀಯ ಹೆದ್ದಾರಿಯಾಗಿದೆ.