ಆನೆ ದಾಳಿಯಿಂದ ಕೂದಲೆಳೆಯಲ್ಲಿ ಪಾರಾದ ಕೂಲಿ ಕಾರ್ಮಿಕ: ವಿಡಿಯೋ ವೈರಲ್ - elephant attack
🎬 Watch Now: Feature Video
Published : Mar 4, 2024, 1:24 PM IST
ಸಕಲೇಶಪುರ: ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದ ಪಿಂಟು ಎಸ್ಟೇಟ್‌ನ ಅಡಿಕೆ ತೋಟದಲ್ಲಿ ಕೂಲಿ ಕಾರ್ಮಿಕರೊಬ್ಬರು ಆನೆಯ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕೂಲಿ ಕಾರ್ಮಿಕರ ಗಮನಕ್ಕೆ ಬಾರದಂತೆ ಸಮೀಪಿಸಿದ ಆನೆಯೊಂದು, ಇಬ್ಬರ ಮೇಲೆ ಏಕಾಏಕಿ ದಾಳಿ ನಡೆಸಲು ಯತ್ನಿಸಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರ್ಮಿಕರು ಅಲ್ಲಿಂದ ಓಡಿದ್ದಾರೆ. ಅವರಲ್ಲಿ ಒಬ್ಬರು ಬೆನ್ನಟ್ಟಿ ಬಂದ ಆನೆಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ.
ನಂತರ ಇನ್ನೊಬ್ಬ ಕಾರ್ಮಿಕನನ್ನು ಆನೆ ಅಟ್ಟಿಸಿಕೊಂಡು ಹೋಗಿದ್ದು, ಆತ ಸಹ ಓಡಿ ಮನೆಯೊಳಗೆ ಹೋಗಿ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಆಗ ಮನೆಗೆ ಬೀಗ ಹಾಕಿದ್ದರಿಂದ, ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗೆ ಹೋಗಿ ಮಲಗಿ ಜೀವ ಉಳಿಸಿಕೊಂಡಿದ್ದಾರೆ.
ಇದೇ ಆನೆ ಜ.4 ರಂದು ಬೇಲೂರು ತಾಲೂಕಿನ ಮತ್ತಾವರದಲ್ಲಿ ವಸಂತ್ ಎಂಬವರನ್ನು ಬಲಿ ಪಡೆದಿತ್ತು. ಅಲ್ಲದೆ 15 ದಿನಗಳ ಹಿಂದೆ ಹೆಬ್ಬನಹಳ್ಳಿಯಲ್ಲಿ ಮೂವರ ಮೇಲೆ ದಾಳಿ ಮಾಡಿತ್ತು.
ಇದನ್ನೂ ನೋಡಿ: ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಗಜರಾಜ ಪ್ರತ್ಯಕ್ಷ: ಆತಂಕಗೊಂಡ ಜನರು