ವಿಧಾನ ಪರಿಷತ್ ಕಲಾಪ: ನೇರಪ್ರಸಾರ - Council Live - COUNCIL LIVE
🎬 Watch Now: Feature Video
Published : Jul 16, 2024, 10:58 AM IST
|Updated : Jul 16, 2024, 12:11 PM IST
ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಪರಿಷತ್ ಕಲಾಪ ನಡೆಯುತ್ತಿದ್ದು ಕಲಾಪದ ನೇರಪ್ರಸಾರ ಇಲ್ಲಿದೆ. ಉಭಯ ಸದನಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಂತ್ರ ಹೆಣೆದಿವೆ. ಸರ್ಕಾರ ಕೂಡ ಪ್ರತಿಪಕ್ಷಗಳಿಗೆ ಪ್ರತ್ಯುತ್ತರ ನೀಡಲು ತಯಾರಿ ಮಾಡಿಕೊಂಡಿದೆ. ಸೋಮವಾರ ನಡೆದ ಮೊದಲ ದಿನದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರಗಳು ಪ್ರಸ್ತಾಪ ಮಾಡಲಾಗಿತ್ತು. ಈ ಭ್ರಷ್ಟಾಚಾರ ನಡೆದಿರುವ ಕುರಿತಂತೆ ನಿಯಮ 59ರದಡಿ ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಸದಸ್ಯ ಸಿ.ಟಿ.ರವಿ ವಿಧಾನ ಪರಿಷತ್ನಲ್ಲಿ ಪ್ರಸ್ತಾಪಿಸುತ್ತಿದ್ದಂತೆ ಆಡಳಿತ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಸಭಾಪತಿಗಳು ಚರ್ಚೆಗೆ ಅನುಮತಿ ನೀಡಿಲ್ಲ. ಈಗ ಯಾಕೆ ಪ್ರಸ್ತಾಪ ಮಾಡುತ್ತೀರಿ ಎಂದು ಆಡಳಿತ ಪಕ್ಷದ ಸದಸ್ಯರು ಪ್ರಶ್ನಿಸುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಎದ್ದು ನಿಂತು ಆಕ್ಷೇಪಿಸಿದ್ದರು. ಕೆಲಕಾಲ ಆಡಳಿತ ಹಾಗೂ ಪ್ರತಿಪಕ್ಷಗಳು ಆರೋಪ-ಪ್ರತ್ಯಾರೋಪದ ಸುರಿಮಳೆ ಸುರಿಸಿದ್ದರು. ಅಧಿವೇಶನ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಎಂದು ಆಗ್ರಹಿಸಿ ಶಾಸಕರ ಭವನದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಕೂಡ ನಡೆಸಿದ್ದರು. ಇದೇ ವಿಚಾರಗಳು ಇಂದೂ ಸಹ ಮುಂದುವರೆಯುವ ಸಾಧ್ಯತೆ ಇದೆ.
Last Updated : Jul 16, 2024, 12:11 PM IST