LIVE: ಲೋಕಸಭೆ ಫಲಿತಾಂಶದ ಬಳಿಕ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ - Lok Sabha Election Results
🎬 Watch Now: Feature Video
Published : Jun 4, 2024, 8:45 PM IST
|Updated : Jun 4, 2024, 9:16 PM IST
ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸರಳ ಬಹುಮತ ಪಡೆದರೂ 300ರ ಗಡಿ ದಾಟಿಲ್ಲ. ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟ 230ಕ್ಕೂ ಹೆಚ್ಚು ಸೀಟು ಗೆದ್ದು, ತಕ್ಕ ಪೈಪೋಟಿ ನೀಡಿದೆ. ಫಲಿತಾಂಶದ ಬೆನ್ನಲ್ಲೇ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ನಾಯಕರು ಭಾಗಿಯಾಗಿದ್ದಾರೆ.ಕಳೆದ ಬಾರಿಗೆ ಹೋಲಿಸಿದರೆ 292 ಕ್ಷೇತ್ರಗಳಲ್ಲಿ ಗೆದ್ದಿರುವ ಎನ್ಡಿಎಗೆ ಈ ಬಾರಿ ಹಿನ್ನಡೆಯಾಗಿದೆ. 400 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಎನ್‌ಡಿಎ, ಪ್ರಧಾನಿ ನರೇಂದ್ರ ಮೋದಿ ಅವರ ಲೆಕ್ಕಾಚಾರಗಳು ಹಾಗೂ ಮತದಾನೋತ್ತರ ಸಮೀಕ್ಷೆಗಳ ಭವಿಷ್ಯವನ್ನು ಮತದಾರ ಪ್ರಭು ತಲೆಕೆಳಗು ಮಾಡಿದ್ದಾನೆ. 2014ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 354, 2019ರಲ್ಲಿ 303 ಕ್ಷೇತ್ರಗಳಲ್ಲಿ ಗೆದ್ದಿತ್ತು. ಈ ಬಾರಿ ಚುನಾವಣೆಯಲ್ಲೂ ಗೆಲುವಿನ ಅತ್ಯುತ್ಸಾಹದಲ್ಲೇ ಪ್ರಧಾನಿ ನರೇಂದ್ರ ಮೋದಿ 400ರ ಗಡಿದಾಟುವ ಮಹಾಘೋಷಣೆ ಮೊಳಗಿಸಿದ್ದರು.
Last Updated : Jun 4, 2024, 9:16 PM IST