ಲೋಕಸಭೆ ಚುನಾವಣೆ: ಬಿಜೆಪಿ 'ಸಂಕಲ್ಪ ಪತ್ರ' ಪ್ರಣಾಳಿಕೆ ಬಿಡುಗಡೆ - ನೇರ ಪ್ರಸಾರ - BJP Manifesto - BJP MANIFESTO
🎬 Watch Now: Feature Video


Published : Apr 14, 2024, 9:19 AM IST
|Updated : Apr 14, 2024, 10:47 AM IST
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ತನ್ನ 'ಸಂಕಲ್ಪ ಪತ್ರ' ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಹಮ್ಮಿಕೊಂಡಿರುವ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಿದ್ದಾರೆ. ಈ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.ಬಿಜೆಪಿ ಸರ್ಕಾರವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತು 370ನೇ ವಿಧಿಯನ್ನು ರದ್ದುಗೊಳಿಸುವುದು ಸೇರಿದಂತೆ ತನ್ನ ಪ್ರಮುಖ ಸೈದ್ಧಾಂತಿಕ ಭರವಸೆಗಳನ್ನು ಈಡೇರಿಸಿದೆ. ಈಗ ಆಡಳಿತ ಪಕ್ಷದ ದೊಡ್ಡ ಸಾಂಸ್ಕೃತಿಕ ಮತ್ತು ಹಿಂದುತ್ವದ ಅಜೆಂಡಾಗಳು ಪ್ರಣಾಳಿಕೆಯಲ್ಲಿ ಹೇಗೆ ಇರುತ್ತವೆ ಎಂಬುದರ ಮೇಲೆ ಎಲ್ಲರ ಕಣ್ಣಿದೆ.ಈಗಾಗಲೇ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 'ನ್ಯಾಯ ಪತ್ರ' ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಮುಖ ಐದು ಅಂಶಗಳಲ್ಲೇ ಕಾಂಗ್ರೆಸ್ ಪ್ರಣಾಳಿಕೆ ಕೇಂದ್ರೀಕೃತವಾಗಿದ್ದು, 25 ಗ್ಯಾರಂಟಿಗಳನ್ನು ನೀಡಿದೆ. ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1ರ ವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
Last Updated : Apr 14, 2024, 10:47 AM IST