ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಸಂಭ್ರಮ: ವಿಡಿಯೋ - NANJANGUD SRIKANTESHWARA TEMPLE

🎬 Watch Now: Feature Video

thumbnail

By ETV Bharat Karnataka Team

Published : Feb 26, 2025, 5:31 PM IST

ಮೈಸೂರು: 'ದಕ್ಷಿಣಕಾಶಿ' ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಇಂದು ಮಹಾ ಶಿವರಾತ್ರಿ ಸಂಭ್ರಮ ಕಳೆಗಟ್ಟಿದೆ. ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಅಪಾರ ಸಂಖ್ಯೆಯಲ್ಲಿ ದೇಗುಲಕ್ಕೆ ಆಗಮಿಸುತ್ತಿರುವ ಭಕ್ತರು ಕಪಿಲಾ ನದಿಯಲ್ಲಿ ಮಿಂದು, ಶ್ರೀಕಂಠೇಶ್ವರನ ದರ್ಶನ ಪಡೆಯುತ್ತಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿದ್ದು, ಶಿವನಿಗೆ ಉರುಳು ಸೇವೆ ಮಾಡಿ ಬಿಲ್ವಪತ್ರೆ ಸಮರ್ಪಿಸಿ ಭಕ್ತಿ ಸಮರ್ಪಿಸುತ್ತಿದ್ದಾರೆ.

ದೇವಸ್ಥಾನದ ಮುಂಭಾಗ ಶಿವರಾತ್ರಿಯ ಜಾಗರಣೆ ನಿಮಿತ್ತ ರಾತ್ರಿಯಿಡೀ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಮಾತನಾಡಿ, "ಮುಂಜಾನೆಯಿಂದಲೇ ದೇವರಿಗೆ ಕ್ಷೀರಾಭೀಷೇಕ, ಫಲ ಪಂಚಾಮೃತಾಭಿಷೇಕ, ರುದ್ರಾಭಿಷೇಕಗಳು ನಡೆದವು. ರಾತ್ರಿ ಜಾಗರಣೆ ನಡೆಯಲಿದೆ" ಎಂದು ತಿಳಿಸಿದರು.

ಮಹಾಶಿವರಾತ್ರಿಯ ಜಾಗರಣೆಯ ಪ್ರಯುಕ್ತ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯದ ಸುತ್ತಮುತ್ತ ಬೀಡುಬಿಟ್ಟಿದ್ದಾರೆ‌. ಕಪಿಲಾ ನದಿ ತೀರದಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ‌ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ತ್ರಿನೇಶ್ವರ ದೇವಾಲಯದಲ್ಲಿ ಯದು ವಂಶಸ್ಥರಿಂದ ಪೂಜೆ: ಸಾರ್ವಜನಿಕವಾಗಿ 2ನೇ ಮಗನ ಹೆಸರು ಘೋಷಿಸಿದ ಯದುವೀರ್​ ಒಡೆಯರ್​

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.