ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ: ನೇರ ಪ್ರಸಾರ - Seva Award Live - SEVA AWARD LIVE
🎬 Watch Now: Feature Video
Published : Oct 2, 2024, 4:06 PM IST
|Updated : Oct 2, 2024, 7:02 PM IST
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - 2024 ಮತ್ತು 2019 ರಿಂದ 2023ನೇ ಸಾಲಿನ ವರೆಗಿನ ಟೀಯೆಸ್ಸಾರ್ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳ ಪ್ರದಾನ ಸಮಾರಂಭ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಬಾಗಿಯಾಗಿದ್ದಾರೆ. ಅದರ ನೇರ ಪ್ರಸಾರ ಇಲ್ಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬಿಬಿಎಂಪಿ ವತಿಯಿಂದ ಇಂದು ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಸಿಎಂ ದ್ದರಾಮಯ್ಯ, ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಘೋಷಿಸಿದರು. ಮಹಾತ್ಮ ಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿದರು. ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡರು. ಬಳಿಕ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿದರು. ನಂತರ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ವಿವರಿಸಿದರು.
Last Updated : Oct 2, 2024, 7:02 PM IST