ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ: ನೇರ ಪ್ರಸಾರ - SURYARASHMI TOUCH
🎬 Watch Now: Feature Video
Published : Jan 14, 2025, 5:08 PM IST
ಬೆಂಗಳೂರು: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿ ಮಾಡಲಿದ್ದು, ಅದರ ನೇರ ಪ್ರಸಾರ ಇಲ್ಲಿದೆ. ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯನ ಬೆಳಕು ನೇರವಾಗಿ ದೇವಸ್ಥಾನದ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ ಮಾಡಲಿದ್ದು, ಈ ಐತಿಹಾಸಿಕ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದಾರೆ. ಅರ್ಚಕರನ್ನು ಬಿಟ್ಟರೆ ಯಾರಿಗೂ ದೇವಸ್ಥಾನದ ಒಳ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ಹಾಗಾಗಿ ಪ್ರತಿ ವರ್ಷ ಭಕ್ತರಿಗೆ ಸೂರ್ಯರಶ್ಮಿ ವೀಕ್ಷಣೆಗೆ ಅನುಕೂಲವಾಗುವಂತೆ ದೇವಾಲಯದ ಹೊರಾಂಗಣದಲ್ಲಿ ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಲಾಗಿದೆ. ಸೂರ್ಯರಶ್ಮಿ ಬೀಳುವ ದೃಶ್ಯವನ್ನು ಭಕ್ತರು ಕಣ್ತುಂಬಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. ಈ ವಿಶೇಷ ದಿನದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಹೋಮ, ಹವನಗಳು ಸಹ ನಡೆಯುತ್ತಿವೆ. ಬೆಳ್ಳಗ್ಗೆ 5 ಗಂಟೆಯಿಂದಲೇ ಗಂಗಾಧರನಿಗೆ ವಿಶೇಷ ಪೂಜೆ ಆರಂಭವಾಗಿದ್ದು, ಈಗಲೂ ಮುಂದುವರೆದಿದೆ. ಸಾವಿರಾರು ಮಂದಿ ಭಕ್ತರು ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ, ಪುನಸ್ಕಾರಗಳೊಂದಿಗೆ ದೇವರ ದರ್ಶನ ಪಡೆದು ಪುನೀತರಾದರು. ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.