ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸುದ್ದಿಗೋಷ್ಠಿ - Pressmeet
🎬 Watch Now: Feature Video
Published : Apr 24, 2024, 12:46 PM IST
|Updated : Apr 24, 2024, 1:26 PM IST
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ - 2024, ಕರ್ನಾಟಕದಲ್ಲಿ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನ ಏಪ್ರಿಲ್ 26 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅಂತಿಮ ಪೂರ್ವ ತಯಾರಿ ಹಾಗೂ ಮೇ 07 ರಂದು ನಡೆಯಲಿರುವ ಎರಡನೇ ಹಂತದ ಮತದಾನದ ಅಂತಿಮ ಅಭ್ಯರ್ಥಿಗಳು ಮತ್ತು ರಾಜ್ಯದ ಮತದಾರರ ಪಟ್ಟಿ ಕುರಿತು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಉಡುಪಿ - ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ (ಎಸ್ಸಿ) ಈ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ ( ಎಸ್ಸಿ ), ಕಲಬುರಗಿ ( ಎಸ್ಟಿ ), ರಾಯಚೂರು (ಎಸ್ಟಿ) ಬೀದರ್, ಕೊಪ್ಪಳ, ಬಳ್ಳಾರಿ (ಎಸ್ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.
Last Updated : Apr 24, 2024, 1:26 PM IST