ಹುಬ್ಬಳ್ಳಿ: ಗಣರಾಜ್ಯೋತ್ಸವದ ದಿನದಂದು ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ - ಹುಬ್ಬಳ್ಳಿ
🎬 Watch Now: Feature Video
Published : Jan 28, 2024, 5:13 PM IST
ಹುಬ್ಬಳ್ಳಿ: ಗಣರಾಜ್ಯೋತ್ಸವದ ದಿನ ಸಂಗೊಳ್ಳಿ ರಾಯಣ್ಣ ಪಾತ್ರ ಮಾಡಲು ಶಾಲೆಗೆ ತೆರಳಿದ್ದ ವಿದ್ಯಾರ್ಥಿಯೋರ್ವ ಎರಡು ದಿನಗಳ ಬಳಿಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಮನಕಲಕುವ ಘಟನೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ನಡೆದಿದೆ. ಮನೋಜ್ ಪೂಜಾರ (10) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜ.26 ರಂದು ಗಣರಾಜ್ಯೋತ್ಸವದ ಅಂಗವಾಗಿ ಶಾಲೆಯಲ್ಲಿ ಸಾಂಸ್ಕೃತಿಕ ಮತ್ತು ದೇಶ ಭಕ್ತಿಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾಲಕ ಮನೋಜ್ ಸ್ವಾತಂತ್ರ್ಯ ಸೇನಾನಿ ವೀರ ಸಂಗೊಳ್ಳಿ ರಾಯಣ್ಣನ ಪಾತ್ರ ಮಾಡಲು ತೆರಳಿದ್ದ. ಆದ್ರೆ ಅಂದು ಕಾರ್ಯಕ್ರಮ ಮುಗಿಸಿಕೊಂಡು ಸಂಜೆಯಾದರೂ ಮಗ ಮನೆಗೆ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇಂದು ಸಂಶಿಯ ಕೆರೆಯಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಮೃತ ಬಾಲಕನ ಶವವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಚಿಕ್ಕೋಡಿ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ