ಹುಬ್ಬಳ್ಳಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರಾದ ಕುಟುಂಬ - CAR FIRE
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/10-10-2024/640-480-22648207-thumbnail-16x9-news.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Oct 10, 2024, 10:06 AM IST
ಹುಬ್ಬಳ್ಳಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಕುಟುಂಬಸ್ಥರು ಕಾರಿನಿಂದ ಹೊರಬಂದಿದ್ದರಿಂದ ಯಾವುದೇ ಜೀವ ಹಾನಿಯಾಗಿಲ್ಲ.
ಗಣೇಶಪೇಟೆಯಿಂದ ಗೋಕುಲ ರಸ್ತೆ ಕಡೆಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕ್ಷಣಾರ್ಧದಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಸ್ಥಳೀಯರು ನಂದಿಸಿದ್ದಾರೆ. ಇದರಿಂದಾಗಿ ಭಾರಿ ಅನಾಹುತ ತಪ್ಪಿದೆ. ಸುರಿಯುವ ಮಳೆಯ ನಡುವೆಯೂ ಇಂಡಿಗೋ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು, ಪ್ರಯಾಣಿಕರು ಪಾರು - Car Caught Fire
ಇದನ್ನೂ ಓದಿ: ಬನ್ನೇರುಘಟ್ಟದಲ್ಲಿ ಸಫಾರಿ ಬಸ್ ಹತ್ತಿ ಕಿಟಕಿಯೊಳಗೆ ಇಣುಕಿ ನೋಡಿದ ಚಿರತೆ: ವಿಡಿಯೋ
ಇದನ್ನೂ ಓದಿ: ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು, ಐವರಿಗೆ ಗಾಯ - Car Accident