ಬಿಜೆಪಿ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ - ನೇರ ಪ್ರಸಾರ - Mysuru Chalo - MYSURU CHALO
🎬 Watch Now: Feature Video
Published : Aug 3, 2024, 10:03 AM IST
|Updated : Aug 3, 2024, 12:20 PM IST
ಬೆಂಗಳೂರು: ಮುಡಾ ಹಗರಣ ಸಂಬಂಧ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ 'ಮೈಸೂರು ಚಲೋ ಪಾದಯಾತ್ರೆ' ನಡೆಸುತ್ತಿದೆ. ಕೆಂಗೇರಿಯ ಕೆಂಪಮ್ಮ ದೇವಸ್ಥಾನ, ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ. ಸಭಾಮಂಟಪ ಹಾಗೂ ವೇದಿಕೆಯಲ್ಲಿ ಪಾದಯಾತ್ರೆಗೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಚಾಲನೆ ನೀಡುತ್ತಿದ್ದಾರೆ. ಇಂದಿನಿಂದ ಆಗಸ್ಟ್ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದೆ. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ. ಆಗಸ್ಟ್ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ.
Last Updated : Aug 3, 2024, 12:20 PM IST