thumbnail

By ETV Bharat Karnataka Team

Published : 3 hours ago

Updated : 39 minutes ago

ETV Bharat / Videos

LIVE: ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಕಾರ್ಯಕ್ರಮ - Mysuru Dasara Inauguration

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಲಾಗುತ್ತಿದೆ. ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸಲಾಗುತ್ತಿದೆ. ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ, ಚಾಮುಂಡಿ ತಾಯಿಗೆ ಪುಪ್ಪಾರ್ಚನೆ ಮಾಡಿ ದಸರಾಗೆ ಚಾಲನೆ ನೀಡುತ್ತಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ವಹಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ದಾರೆ. ಇಂದಿನಿಂದ ಅಕ್ಟೋಬರ್​ 12ರ ವರೆಗೆ ಮೈಸೂರು ದಸರಾ ನಡೆಯಲಿದೆ. ಪ್ರತಿದಿನವೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಲಿವೆ. ಅ.12ರಂದು ಜಗತ್​ಪ್ರಸಿದ್ಧ ದಸರಾ ಜಂಬೂ ಸವಾರಿ ಮೆರವಣಿಗೆ ಇದೆ. ಇಂದಿನಿಂದ ದಸರಾ ಚಲನಚಿತ್ರೋತ್ಸವ, ದಸರಾ ಆಹಾರ ಮೇಳ, ಫಲಪುಷ್ಪ ಪ್ರದರ್ಶನಗಳು ಆರಂಭವಾಗಲಿವೆ. ಅಲ್ಲದೆ, ದಸರಾ ಕುಸ್ತಿ, ದಸರಾ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ, ದಸರಾ ಸಿಎಂ ಕಪ್‌ ಕ್ರೀಡಾಕೂಟ, ದಸರಾ ಪುಸ್ತಕ ಮೇಳ, ನವರಾತ್ರಿ ಜಾನಪದ ರಂಗ ಉತ್ಸವ, ವಸ್ತು ಪ್ರದರ್ಶನ ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಜೊತೆಗೆ, ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಮಂಟಪದ ಬಳಿ ವಿದ್ಯುತ್ ದೀಪಾಲಂಕಾರ ಹಾಗೂ ದೀಪಾಲಂಕಾರಗೊಂಡಿರುವ "ವಿದ್ಯುತ್ ರಥ"ಕ್ಕೆ ಚಾಲನೆ ನೀಡುವ ಕಾರ್ಯಕ್ರಮವಿದೆ.
Last Updated : 39 minutes ago

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.