ಉಡುಪಿ: ನಿಲ್ಲಿಸಿದ್ದ ಬಸ್ಗೆ ಹಿಂದಿನಿಂದ ಗುದ್ದಿದ ಹೊಸ ಫಾರ್ಚೂನರ್ ಕಾರು - New Fortuner car hit the bus - NEW FORTUNER CAR HIT THE BUS
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/27-06-2024/640-480-21807872-thumbnail-16x9-meg.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Jun 27, 2024, 5:38 PM IST
ಉಡುಪಿ: ನಿಲ್ಲಿಸಿದ್ದ ಸಿಟಿ ಬಸ್ಗೆ ಫಾರ್ಚೂನರ್ ಕಾರೊಂದು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ಈ ವೇಳೆ ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಿಟಿ ಬಸ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಹೋಗಿದೆ. ಜೊತೆಗೆ ಬಸ್ನ ಹಿಂಬದಿಗೂ ಹಾನಿಯಾಗಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿದ ಕೂಡಲೇ ಶೋರೂಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ನಗರದ ಸಂಚಾರ ಪೊಲೀಸ್ ಠಾಣಾಧಿಕಾರಿಗಳು, ಸಿಬ್ಬಂದಿ ವರ್ಗ ತೆರಳಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.
ಇದನ್ನೂ ನೋಡಿ: ಐಸ್ಕ್ರೀಂ ತಿನ್ನುತ್ತಿದ್ದ ಪೊಲೀಸರ ಮೇಲೆ ಕಾರು ಹರಿಸಿದ ಎಎಸ್ಐ: ಪಾನಮತ್ತ ಅಧಿಕಾರಿ ಬಂಧನ - Ludhiana Two Policemen Died