ನೇಹಾ ಕೊಲೆ ಪ್ರಕರಣದ ಚಾರ್ಜ್‌ಶೀಟ್ ಸಲ್ಲಿಕೆ: ನಿರಂಜನಯ್ಯ ಹಿರೇಮಠ ಹೇಳಿದ್ದೇನು? - Niranjanayya Hiremath - NIRANJANAYYA HIREMATH

🎬 Watch Now: Feature Video

thumbnail

By ETV Bharat Karnataka Team

Published : Jul 9, 2024, 4:39 PM IST

ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಎಂಬವರ ಪುತ್ರಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ಇಲ್ಲಿಯ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು 3ನೇ ಜೆಎಂಎಫ್‌ಸಿ ಕೋರ್ಟ್​ಗೆ 483 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನೇಹಾ ತಂದೆ ನಿರಂಜನಯ್ಯ ಹಿರೇಮಠ, ಕೋರ್ಟ್​ಗೆ ಜಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದೇವೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ನಾನು ಜಾರ್ಜ್​ಶೀಟ್​ನ ಪ್ರತಿ ಕೇಳಿದ್ದೆ, ಅದಕ್ಕೆ ನಾವು ಕೊಡುವುದಕ್ಕೆ ಬರುವುದಿಲ್ಲ ಕೋರ್ಟ್​ನಿಂದ ತೆಗೆದುಕೊಳ್ಳಬೇಕು ಎಂದು ಹೇಳಿದರು. 483 ಪುಟಗಳ ಜಾರ್ಜ್​ಶೀಟ್​ಗಾಗಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇನೆ. ಜಾರ್ಜ್​ಶೀಟ್​ ಸಿಕ್ಕ ಬಳಿಕ ಕೂಲಂಕಷವಾಗಿ ಓದಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಆದೇಶ ಪ್ರಕಾರ ನಿಷ್ಪಕ್ಷಪಾತ ತನಿಖೆ ನಡೆದಿದೆ. ಹೀಗಾಗಿ ಸಿಐಡಿ ಅಧಿಕಾರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನ್ಯಾಯಾಲಯದಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದರು.

ಇದನ್ನೂ ಓದಿ: ನೇಹಾ ಹಿರೇಮಠ ಕೊಲೆ ಕೇಸ್: 483 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಸಿಐಡಿ - Neha Hiremath Murder Case

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.