ಸಂಸದ ಕಟೀಲ್​ ಮನೆಗೆ ಮುತ್ತಿಗೆ ಯತ್ನ: ಎನ್ಎಸ್​​ಯುಐ ಕಾರ್ಯಕರ್ತರು ಪೊಲೀಸ್​ ವಶಕ್ಕೆ - MP Nalin Kumar Kateel

🎬 Watch Now: Feature Video

thumbnail

By ETV Bharat Karnataka Team

Published : Feb 8, 2024, 4:29 PM IST

ಮಂಗಳೂರು(ದಕ್ಷಿಣ ಕನ್ನಡ): ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಮತ್ತು ಯಾವುದೇ ಅಭಿವೃದ್ಧಿ ಕಾರ್ಯವನ್ನೂ ಮಾಡಿಲ್ಲ ಎಂದು ಆರೋಪಿಸಿರುವ ಎನ್ಎಸ್​ಯುಐ ಕಾರ್ಯಕರ್ತರು ಇಂದು ನಳಿನ್ ಕುಮಾರ್ ಕಟೀಲ್​​ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಉರ್ವ ಠಾಣೆಯ ಪೊಲೀಸರು ಕಟೀಲ್​​ ಮನೆ ಬಳಿ ಬ್ಯಾರಿಕೇಡ್ ಅಳವಡಿಸಿ ಮುತ್ತಿಗೆ ಯತ್ನ ತಡೆದರು. ಎನ್ಎಸ್​ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಮುತ್ತಿಗೆಗೆ ಅವಕಾಶ ನೀಡಬೇಕೆಂದು ಠಾಣಾಧಿಕಾರಿ ಭಾರತಿ ಅವರೆದುರು ಆಕ್ರೋಶ ವ್ಯಕ್ತಪಡಿಸಿದರು. 

ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಬ್ಯಾರಿಕೇಡ್ ತಳ್ಳಿ ಮುತ್ತಿಗೆ ಹಾಕುವ ಯತ್ನ ನಡೆಯಿತು. ಈ ಸಂದರ್ಭದಲ್ಲಿ 20-25 ಮಂದಿ ಎನ್ಎಸ್​ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು. ''ನಳಿನ್ ಹಠಾವೋ ದೇಶ್ ಬಚಾವೋ'' ಎಂಬ ಘೋಷಣೆ ಕೇಳಿಬಂತು.

ಈ ಸಂದರ್ಭದಲ್ಲಿ ಮಾತನಾಡಿದ ಸುಹಾನ್ ಆಳ್ವ, "ಜಿಲ್ಲೆಯಲ್ಲಿ ಸಾಕಷ್ಟು ಶಾಲಾ, ಕಾಲೇಜುಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸಲಾಗುತ್ತಿದೆ. ಜಿಲ್ಲೆಗೆ ಸಂಸದರ ಕೊಡುಗೆ ಏನು" ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಪುಣೆ ಇವಿಎಂ ಕಳ್ಳತನ ಪ್ರಕರಣ: ಮೂವರು ಹಿರಿಯ ಅಧಿಕಾರಿಗಳು ಸಸ್ಪೆಂಡ್​!

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.