ದಾವಣಗೆರೆಯಲ್ಲಿ ಭಾರೀ ಮಳೆಗೆ ಭತ್ತದ ಬೆಳೆ ನಾಶ: ಪರಿಹಾರಕ್ಕಾಗಿ ರೈತರ ಆಗ್ರಹ - Paddy crop damaged - PADDY CROP DAMAGED
🎬 Watch Now: Feature Video
Published : May 20, 2024, 7:34 AM IST
ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಗೆ ಭತ್ತದ ಬೆಳೆ ನೆಲಸಮ ಆಗಿದೆ. ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಕಟಾವಿಗೆ ಬಂದ ನೂರಾರು ಎಕರೆ ಭತ್ತದ ಬೆಳೆ ಮಣ್ಣು ಪಾಲಾಗಿದೆ.
ಇಷ್ಟು ದಿನಗಳ ಕಾಲ ಮಳೆ ಇಲ್ಲ ಎಂದು ತಲೆಮೇಲೆ ಕೈ ಹೊತ್ತು ಕೂತಿದ್ದ ರೈತರಿಗೆ ಮಳೆರಾಯ ಅವಾಂತರ ಸೃಷ್ಟಿ ಮಾಡಿದ್ದಾನೆ. ಬೆಳೆ ಕಳೆದುಕೊಂಡ ರೈತರು ಪರಿಹಾರಕ್ಕಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಉಳಿದಂತೆ ನಿರಂತರ ಮಳೆಯಿಂದಾಗಿ ದಾವಣಗೆರೆ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಮೆಕ್ಕೆಜೋಳ, ಬಾಳೆ, ಅಡಿಕೆ ತೋಟಗಳಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ.
ಯಲ್ಲೋ ಅಲರ್ಟ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿದ್ದರಿಂದ ಮೂರುದಿನಗಳ ಕಾಲ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ: 14 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ - Karnataka Rain Alert