ಸಂಸತ್ತಿನ ಬಜೆಟ್ ಅಧಿವೇಶನ: LIVE - Parliament Budget Session
🎬 Watch Now: Feature Video
Published : Jul 22, 2024, 11:35 AM IST
|Updated : Jul 22, 2024, 1:34 PM IST
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ನೆಟ್, ನೀಟ್ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣ, ಉತ್ತರ ಪ್ರದೇಶದ ಕನ್ವರ್ ಯಾತ್ರಾ ಘಟನೆಗಳನ್ನು ಪ್ರತಿಪಕ್ಷಗಳು ಅಸ್ತ್ರವಾಗಿ ಬಳಸಿಕೊಂಡು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ ಮಾಡಿಕೊಂಡಿವೆ. ಪ್ರಸಕ್ತ ಅಧಿವೇಶನ ಇಂದಿನಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ನಾಳೆ ಬಜೆಟ್ ಮಂಡಿಸಲಿರುವ ಹಿನ್ನೆಲೆಯಲ್ಲಿ ಇಂದು ಆರ್ಥಿಕ ಸಮೀಕ್ಷೆ 2023-24ಯನ್ನು ಬಿಡುಗಡೆ ಮಾಡಲಿದ್ದಾರೆ. ಇದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಆಗಿದ್ದು, ದೇಶದ ಜನರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಸತತ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್ ನಾಳೆ ಆಯವ್ಯಯ ಮಂಡಿಸಲಿದ್ದಾರೆ. ಈ ಮೂಲಕ ಸತತ 5 ಬಾರಿ ಪೂರ್ಣ ಮತ್ತು 1 ಬಾರಿ ಮಧ್ಯಂತರ ಬಜೆಟ್ ಮಂಡಿಸಿದ್ದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ದಾಖಲೆ ಮುರಿಯಲಿದ್ದಾರೆ. ಹಣಕಾಸು ಸಚಿವೆ ಫೆಬ್ರುವರಿಯಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಮಧ್ಯಂತರ ಬಜೆಟ್ ಮಂಡಿಸಿದ್ದರು. ಬಳಿಕ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಬಹುಮತ ಗಳಿಸಿ ಸತತ ಮೂರನೇ ಬಾರಿ ಅಧಿಕಾರಕ್ಕೇರಿದ್ದು, ಸೀತಾರಾಮನ್ ಅವರಿಗೆ ಮತ್ತೆ ಹಣಕಾಸು ಇಲಾಖೆ ಹೊಣೆ ನೀಡಲಾಗಿದೆ.
Last Updated : Jul 22, 2024, 1:34 PM IST