ಸಂಸತ್ತಿನ ಬಜೆಟ್ ಅಧಿವೇಶನ: ನೇರ ಪ್ರಸಾರ - PARLIAMENT BUDGET SESSION

🎬 Watch Now: Feature Video

thumbnail

By ETV Bharat Karnataka Team

Published : Feb 3, 2025, 11:21 AM IST

Updated : Feb 4, 2025, 6:45 AM IST

ಸಂಸತ್ತಿನ ಬಜೆಟ್ ಅಧಿವೇಶನದ 3ನೇ ದಿನದ ಕಲಾಪ ಲೋಕಸಭೆಯಲ್ಲಿ ಇಂದು ಆರಂಭವಾಗಿದೆ. ಇಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯು ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ಅಂತಿಮ ವರದಿಯನ್ನು ಲೋಕಸಭೆಗೆ ಸಲ್ಲಿಸುವ ನಿರೀಕ್ಷೆಯಿದೆ. ಜೊತೆಗೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಲಿದ್ದಾರೆ.  ಹಾಗೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ 2025-26ನೇ ಸಾಲಿನ ಕೇಂದ್ರ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡುವ ಮೂಲಕ ಬಜೆಟ್ ಅಧಿವೇಶನ ಆರಂಭಗೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿವೇಶನದ ಮೊದಲ ದಿನ 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದರು. ಆ ಬಳಿಕ ಫೆ.1ರಂದು ಸತತ 8ನೇ ಬಾರಿ ಕೇಂದ್ರ ಬಜೆಟ್ ಮಂಡಿಸಿ ದಾಖಲೆ ಮಾಡಿದ್ದಾರೆ. ಬಜೆಟ್​​ ಅಧಿವೇಶನ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತ ಜನವರಿ 31ರಿಂದ ಫೆ.13ರವರೆಗೆ ಮತ್ತು ಎರಡನೇ ಹಂತ ಮಾರ್ಚ್​ 10ರಿಂದ ಪ್ರಾರಂಭವಾಗಿ ಏಪ್ರಿಲ್​ 4ರವರೆಗೆ ನಡೆಯಲಿದೆ. 
Last Updated : Feb 4, 2025, 6:45 AM IST

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.