LIVE: ಲೋಕಸಭಾ ಕಲಾಪ; ಪ್ರಧಾನಿ ಮೋದಿ 3.0 ಸರ್ಕಾರದ ಮೊದಲ ಅಧಿವೇಶನ - Parliament Session 2024
🎬 Watch Now: Feature Video
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಚುನಾಯಿತರಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಜೂನ್ 24ರ ಇಂದಿನಿಂದ ಜುಲೈ 3ರ ವರೆಗೆ ಸಂಸತ್ ಕಲಾಪ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಸರ್ಕಾರದ ಮೊದಲ ಅಧಿವೇಶನ ಇದಾಗಿದೆ. ಇತ್ತೀಚೆಗಿನ ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಹಂಗಾಮಿ ಸ್ವೀಕರ್ ನೇಮಕ ಸೇರಿದಂತೆ ಇತರ ವಿಚಾರಗಳು ಸಂಸತ್ನಲ್ಲಿ ಚರ್ಚೆಗೆ ಬರಲಿವೆ. ಇವೆಲ್ಲದರ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿದ್ದು, ಸದನದಲ್ಲಿ ಗದ್ದಲ ಏರ್ಪಡುವ ಸಾಧ್ಯತೆಗಳಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭಾರತೀಯ ಜನತಾ ಪಕ್ಷದ ಸಂಸದ ಭರ್ತೃಹರಿ ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಲೋಕಸಭೆಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಕರೆಯಲಿದ್ದಾರೆ. ಜೂನ್ 26ರಂದು ಸ್ಪೀಕರ್ ಆಯ್ಕೆ ನಡೆಯುವ ಸಾಧ್ಯತೆ ಇದೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Last Updated : Jun 24, 2024, 1:10 PM IST