ಸಂಸತ್ ಅಧಿವೇಶನ: ಲೋಕಸಭೆ ಕಲಾಪದ ನೇರಪ್ರಸಾರ - Lok Sabha Session - LOK SABHA SESSION

🎬 Watch Now: Feature Video

thumbnail

By ETV Bharat Karnataka Team

Published : Jul 3, 2024, 11:27 AM IST

Updated : Jul 3, 2024, 11:32 AM IST

ನವದೆಹಲಿ: ಲೋಕಸಭೆಯ ಇಂದಿನ ಕಲಾಪ ಆರಂಭವಾಗಿದೆ. ಮಂಗಳವಾರ(ನಿನ್ನೆ) ನಡೆದ ಕಲಾಪದಲ್ಲಿ ಪ್ರತಿಪಕ್ಷಗಳ ಘೋಷಣೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲೆ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದರು. ಇದೇ ವೇಳೆ, ಕಾಂಗ್ರೆಸ್​ ಹಾಗೂ ರಾಹುಲ್​ ಗಾಂಧಿ ಹೇಳಿಕೆಗೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಕಾಂಗ್ರೆಸ್ ಸತತ ಮೂರು ಬಾರಿಯೂ 100 ಸ್ಥಾನಗಳನ್ನು ದಾಟದಿರುವುದು ಇದೇ ಮೊದಲು. ಈ ಸೋಲನ್ನು ಒಪ್ಪಿಕೊಳ್ಳುವ ಬದಲು ದುರಹಂಕಾರದಿಂದ ವರ್ತಿಸುತ್ತಿದ್ದಾರೆ. ನಮ್ಮನ್ನು(ಬಿಜೆಪಿ) ಸೋಲಿಸಿದರು ಎಂಬ ಕಥೆ ಕಟ್ಟಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೇ, ಲೋಕಸಭೆಯಲ್ಲಿ ಅನುಕಂಪ ಗಿಟ್ಟಿಸಿಕೊಳ್ಳಲು ಹೊಸ ನಾಟಕವಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.  ತಮ್ಮ ಎರಡು ಗಂಟೆಗಳ ಸುದೀರ್ಘ ಭಾಷಣದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿ ಹಲವು ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಪ್ರಧಾನಿ ಉತ್ತರದ ನಂತರ ಲೋಕಸಭೆ ಎರಡು ದಿನಗಳ ಚರ್ಚೆಯ ನಂತರ ಧ್ವನಿ ಮತದ ಮೂಲಕ ಧನ್ಯವಾದ ನಿರ್ಣಯ ಅಂಗೀಕರಿಸಿತು.  ಸೋಮವಾರದ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಧರ್ಮದೊಂದಿಗೆ ರಾಜಕೀಯ ಬೆರೆಸುವುದು, ರೈತರನ್ನು ನಿರ್ಲಕ್ಷಿಸುವುದು, ನೋಟು ಅಮಾನ್ಯೀಕರಣ, ಜಿಎಸ್‌ಟಿ ಮತ್ತು ಅಗ್ನಿಪಥ್‌ನಂತಹ ದೋಷಪೂರಿತ ನೀತಿಗಳ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದರು.  ಇಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ಮೋದಿ ರಾಜ್ಯಸಭೆಯಲ್ಲಿ ಉತ್ತರ ನೀಡುವ ಸಾಧ್ಯತೆಯಿದೆ.
Last Updated : Jul 3, 2024, 11:32 AM IST

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.