LIVE: ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ - PM Modi Campaign - PM MODI CAMPAIGN
🎬 Watch Now: Feature Video
Published : Apr 20, 2024, 3:22 PM IST
|Updated : Apr 20, 2024, 4:29 PM IST
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರದ ಚೊಕ್ಕನಹಳ್ಳಿ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶ ಉದ್ದೇಶಿಸಿ ಪ್ರಧಾನಿ ಇಂದು ಮಾತನಾಡಲಿದ್ದಾರೆ. ವೇದಿಕೆಯಲ್ಲಿ ಪ್ರಧಾನಿ ಮೋದಿ ಜೊತೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೂಡ ಭಾಗವಹಿಸಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು ಒಂದು 1 ಲಕ್ಷ ಜನರು ಸಮಾವೇಶದಲ್ಲಿ ಸೇರುವ ನಿರೀಕ್ಷೆ ಇದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಸುಧಾಕರ್ ಮತ್ತು ಕೋಲಾರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ಬಾಬು ಅವರು ಸ್ಪರ್ಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎನ್ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ಈ ಸಮಾವೇಶದ ಬಳಿಕ ಪ್ರಧಾನಿ ಮೋದಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಪೊಲೀಸರು ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಬೆಂಗಳೂರಲ್ಲಿ ಬಂದೋಬಸ್ತ್ಗಾಗಿ ಎರಡು ಸಾವಿರ ಪೊಲೀಸರನ್ನು ನಿಯೋಜನೆ ಮಾಡಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.
Last Updated : Apr 20, 2024, 4:29 PM IST