LIVE: ಮಂಗಳೂರಲ್ಲಿ ಪ್ರಧಾನಿ ಮೋದಿ ರೋಡ್ ಶೋ - PM Modi Road Show - PM MODI ROAD SHOW
🎬 Watch Now: Feature Video
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Apr 14, 2024, 7:45 PM IST
|Updated : Apr 14, 2024, 8:50 PM IST
ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು.ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್ ಶೋ ಆರಂಭವಾಗಿದೆ. ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಮೂಲಕ ರೋಡ್ ಶೋ ಬಂದು ನವಭಾರತ ವೃತ್ತದಲ್ಲಿ ರೋಡ್ ಶೋ ಸಮಾಪ್ತಿಯಾಗುತ್ತಿದೆ. ಬಳಿಕ ಇಲ್ಲಿಂದ ಪ್ರಧಾನಿ ಮೋದಿಯವರು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ವಿಶೇಷ ವಿಮಾನದ ಮೂಲಕ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ.ಪ್ರಧಾನಿ ರೋಡ್ ಶೋ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಹೊರ ಜಿಲ್ಲೆಗಳಿಂದಲೂ ಕೂಡ ಕರೆಯಿಸಿ ಪೊಲೀಸರನ್ನು ನಿಯೋಜಿಸಲಾಗಿದೆ. ರೋಡ್ ಶೋ ಪ್ರದೇಶವನ್ನು ಏರಿಯಲ್ ವ್ಯೂ ಮೂಲಕ ಪರಿಶೀಲನೆ ನಡೆಸಲಾಗಿದೆ.
Last Updated : Apr 14, 2024, 8:50 PM IST