ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಾತು: LIVE - PM MODI SPEECH
🎬 Watch Now: Feature Video
Published : Feb 4, 2025, 5:38 PM IST
|Updated : Feb 4, 2025, 6:41 PM IST
ನವದೆಹಲಿ: ಸಂಸತ್ನ ಬಜೆಟ್ ಅಧಿವೇಶನದ ನಾಲ್ಕನೇಯ ದಿನವಾದ ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಿದ್ದಾರೆ. ಮೂರನೇಯ ದಿನದಂದು ಅಂದರೆ ನಿನ್ನೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದರು. ಈ ವೇಳೆ ಅವರು ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಮೋದಿ ನೇತೃತ್ವದ ಸರ್ಕಾರ ಮೇಕ್ ಇನ್ ಇಂಡಿಯಾ ಯೋಜನೆಯನ್ನೇನೋ ತಂದಿದೆ. ಇದರ ಉದ್ದೇಶವೂ ಸರಿಯಿದೆ, ಆದರೆ, ಗುರಿ ಮುಟ್ಟಲು ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ. 2014ರಲ್ಲಿ 15.3ರಷ್ಟು ಇದ್ದ ಜಿಡಿಪಿಯಲ್ಲಿ ಉತ್ಪಾದನೆಯ ಪಾಲು ಇದೀಗ ಶೇ 12.6ಕ್ಕೆ ಇಳಿಕೆ ಕಂಡಿದೆ. ಕಳೆದ 60 ವರ್ಷಗಳಲ್ಲಿ ಇದು ಕಡಿಮೆಯಾಗುತ್ತಲೇ ಸಾಗಿದೆ. ಇದೇ ವೇಳೆ ಜಾತಿ ಗಣತಿ ದತ್ತಾಂಶಕ್ಕೆ ಕೃತಕ ಬುದ್ಧಿಮತ್ತೆ (ಎಐ) ಅಳವಡಿಸುವುದರಿಂದ ಪ್ರಯೋಜನವಾಗಲಿದೆ ಎಂದು ಸಲಹೆ ನೀಡಿದ್ದರು. ರಾಹುಲ್ ಗಾಂಧಿ ಭಾಷಣದ ಬೆನ್ನಲ್ಲೇ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ರಾಹುಲ್ ಗಾಂಧಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು.
Last Updated : Feb 4, 2025, 6:41 PM IST