ಅಯೋಧ್ಯಾಧೀಶ ಪ್ರಭು ಶ್ರೀರಾಮನಿಗೆ ಪ್ರಧಾನಿ ಮೋದಿ ಪ್ರಥಮ ಪೂಜೆ: ವಿಡಿಯೋ

🎬 Watch Now: Feature Video

thumbnail

By ETV Bharat Karnataka Team

Published : Jan 22, 2024, 1:15 PM IST

ಅಯೋಧ್ಯೆ: ಅಯೋಧ್ಯೆಯ ಭವ್ಯ ಮಂದಿರದಲ್ಲಿ ವಿರಾಜಮಾನನಾದ ಪ್ರಭು ಶ್ರೀರಾಮನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು ಅವರು ಸುಂದರ ಬಾಲರಾಮನ ಮೂರ್ತಿಯನ್ನು ಅನಾವರಣಗೊಳಿಸಿದರು. ಸರ್ವಾಲಂಕೃತ ಪುರುಷೋತ್ತಮ ಶ್ರೀರಾಮ ಕಣ್ಮನ ಸೆಳೆಯಿತು. ಬಳಿಕ ವಿದ್ವಾಂಸರ ನೇತೃತ್ವದಲ್ಲಿ ನಡೆದ ಪ್ರಥಮ ಪೂಜೆಯಲ್ಲಿ ಶ್ರೀರಾಮನಿಗೆ ಮೋದಿ ಪುಷ್ಪಾರ್ಚನೆ ನೆರವೇರಿಸಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್​ಎಸ್​ಎಸ್​ ಸರಸಂಘಚಾಲಕ ಮೋಹನ್​ ಭಾಗವತ್​, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ರಾಜ್ಯಪಾಲೆ ಆನಂದಿ ಬೆನ್​ ಸೇರಿದಂತೆ ಹಲವರು ಗರ್ಭಗುಡಿಯಲ್ಲಿ ಉಪಸ್ಥಿತರಿದ್ದರು.

ದೇಶ ಮತ್ತು ವಿದೇಶಗಳಿಂದ ಆಗಮಿಸಿದ 8,000ಕ್ಕೂ ಹೆಚ್ಚು ಅತಿಥಿಗಳು ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ರಾಮನ ಭಕ್ತಿ ಮತ್ತು ಉತ್ಸಾಹ ಎಲ್ಲೆಡೆ ಗೋಚರಿಸುತ್ತಿದೆ. ವಿವಿಧ ಮಠಗಳ ಸ್ವಾಮೀಜಿಗಳು ಆಗಮಿಸಿದ್ದಾರೆ. ವಿವಿಧ ಚಿತ್ರರಂಗಗಳ ಗಣ್ಯರು ಈ ಶುಭ ಘಳಿಗೆಯನ್ನು ವೀಕ್ಷಿಸಲು ಬಂದಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಾಣ ಪ್ರತಿಷ್ಠೆ ಹಿನ್ನೆಲೆ ದೇವಸ್ಥಾನವನ್ನು ಅತ್ಯಾಕರ್ಷಕವಾಗಿ ಅಲಂಕರಿಸಲಾಗಿದೆ. ಅಯೋಧ್ಯೆ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮ ನೇರಪ್ರಸಾರಕ್ಕೆ ಸರ್ಕಾರದ ಅನುಮತಿ ಬೇಕಿಲ್ಲ: ಮದ್ರಾಸ್‌ ಹೈಕೋರ್ಟ್​

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.